ತುಮಕೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಹಮ್ಮಿಕೊಂಡಿರುವ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯ ಲೀಗ್ ಪಂದ್ಯಗಳು ಶನಿವಾರ ಮುಕ್ತಾಯಗೊಂಡಿವೆ. ಭಾನುವಾರ ಸೆಮಿಫೈನಲ್, ಫೈನಲ್ ಪಂದ್ಯಗಳು ನಡೆಯಲಿವೆ.

ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಳೆದ ಎರಡು ದಿನಗಳಿಂದ ಪಂದ್ಯಗಳು ನಡೆಯುತ್ತಿವೆ. ಒಳಾಂಗಣ ಕ್ರೀಡಾಂಗಣದಲ್ಲಿ ಮೂರು ಅಂಕಣ ಸಿದ್ಧಪಡಿಸಲಾಗಿದೆ. ಒಂದು ಅಂಕಣದಲ್ಲಿ ಬಾಲಕಿಯರು, ಎರಡು ಕಡೆಗಳಲ್ಲಿ ಬಾಲಕರ ವಿಭಾಗದ ಪಂದ್ಯಗಳು ನಡೆಯುತ್ತಿವೆ. ಟೂರ್ನಿ ಅಂತಿಮ ಹಂತ ತಲುಪಿದ್ದು, ಪ್ರಸಕ್ತ ಸಾಲಿನಲ್ಲಿ ಯಾರು ಪ್ರಶಸ್ತಿ ಪಡೆಯಲಿದ್ದಾರೆ ಎಂಬ ಕುತೂಹಲಕ್ಕೆ ಭಾನುವಾರ ಸಂಜೆ ತೆರೆ ಬೀಳಲಿದೆ.

ಎರಡೂ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಂಡಗಳು ಪ್ರಾಬಲ್ಯ ಸಾಧಿಸುತ್ತಿವೆ. ಶುಕ್ರವಾರ ಮತ್ತು ಶನಿವಾರ ನಡೆದ ಪಂದ್ಯಗಳಲ್ಲಿ ತಂಡದ ಆಟಗಾರರು ಉತ್ತಮ ಆಟದೊಂದಿಗೆ ಗಮನ ಸೆಳೆದರು. ಹಾವೇರಿ, ಉಡುಪಿ ತಂಡಗಳು ಪ್ರಬಲ ಸ್ಪರ್ಧೆ ನೀಡುತ್ತಿವೆ. ತಮ್ಮದೇ ಪಟ್ಟುಗಳನ್ನು ಬಳಸಿ ಎದುರಾಳಿ ತಂಡದ ಆಟಗಾರರನ್ನು ಪಳಗಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.