ಕ್ರೀಡಾಂಗಣದ ₹15 ಲಕ್ಷ ಬಾಕಿ!
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಿಂದ ಸುಮಾರು ₹15 ಲಕ್ಷ ವಿದ್ಯುತ್ ಬಿಲ್ ಪಾವತಿಯಾಗಬೇಕಿದೆ! ಕಳೆದ 7 ತಿಂಗಳಿನಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾಂಗಣದ ಜವಾಬ್ದಾರಿ ವಹಿಸಿಕೊಂಡಿದೆ. ಸ್ಮಾರ್ಟ್ ಸಿಟಿಯಿಂದ ಸುಮಾರು ₹62 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಪಡಿಸಲಾಗಿದೆ. ಆದರೆ ಇದರ ನಿರ್ವಹಣೆಗೆ ಇಲಾಖೆಯ ಅನುದಾನ ಸಾಲದಾಗಿದೆ. ಕನಿಷ್ಠ ವಿದ್ಯುತ್ ಬಿಲ್ ಪಾವತಿಸಲು ಹಣದ ಕೊರತೆ ಎದುರಾಗಿದೆ. ಕಳೆದ ಕೆಲ ದಿನಗಳಿಂದ ನಗರದ ವಿವಿಧೆಡೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದ ಇಲಾಖೆಯ ಕಚೇರಿಗಳನ್ನು ಸಹ ಕ್ರೀಡಾಂಗಣದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಆದರೂ ನಿರ್ವಹಣೆಗಾಗಿ ಅಧಿಕಾರಿಗಳು ಪರದಾಡುತ್ತಿದ್ದಾರೆ.