ತುಮಕೂರು: ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಲು ಶನಿವಾರ ನಗರಕ್ಕೆ ಬಂದಿದ್ದ ರಾಷ್ಟ್ರರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಮತ್ತು ಬಜರಂಗದಳದ ರಘು ಸಕಲೇಶಪುರ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆಯಲ್ಲಿ ಜಿಲ್ಲೆಯ ಹೊರಗಿನವರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ವಿಧಿಸಲಾಗಿತ್ತು. ನಿರ್ಬಂಧದ ಮಧ್ಯೆ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೆರವಣಿಗೆ ಸಾಗಿದ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೂರು ಕೆಎಸ್ಆರ್‌ಪಿ, ಐದು ಡಿಎಆರ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು.