ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ದಾಖಲೆ ಇಲ್ಲದ ₹66.14 ಲಕ್ಷ ಜಪ್ತಿ

802 ಪ್ರಕರಣ ದಾಖಲು
Published 10 ಏಪ್ರಿಲ್ 2024, 14:26 IST
Last Updated 10 ಏಪ್ರಿಲ್ 2024, 14:26 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಮಾರ್ಚ್‌ 16ರಿಂದ ಏ. 10ರ ವರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ, ದಾಖಲೆ ಇಲ್ಲದ ₹66.14 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.

ಇದರಲ್ಲಿ ದಾಖಲೆಗಳಿಲ್ಲದ ₹24.60 ಲಕ್ಷ ಹಣ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಉಳಿದ ₹41.54 ಲಕ್ಷ ಹಣವನ್ನು ಜಿಲ್ಲಾ ಖಜಾನೆಗೆ ಜಮೆ ಮಾಡಲಾಗಿದೆ. ಸಮರ್ಪಕ ದಾಖಲೆ ಒದಗಿಸಿದ ನಂತರ ಆದಾಯ ತೆರಿಗೆ ಇಲಾಖೆಯಲ್ಲಿ ಜಮೆಯಾಗಿರುವ ಹಣ ವಾಪಸ್‌ ನೀಡಲಾಗುತ್ತದೆ.

ಇದೇ ಅವಧಿಯಲ್ಲಿ 9,543 ಲೀಟರ್‌ ಭಾರತೀಯ ತಯಾರಿಕಾ ಮದ್ಯ, 18,116 ಲೀಟರ್‌ ಬಿಯರ್‌ ಹಾಗೂ 456 ಲೀಟರ್‌ ಸೇಂದಿ ಸೇರಿ ₹71.82 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. ₹1.70 ಲಕ್ಷ ಮೌಲ್ಯದ 5.35 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಚುನಾವಣಾ ನೀತಿ ಸಂಹಿತೆ, ಅಬಕಾರಿ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಒಟ್ಟು 802 ಪ್ರಕರಣಗಳನ್ನು ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT