ತುಮಕೂರು: ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬುಧವಾರ ಚಾಲನೆ ನೀಡಿದರು.
ಪದವಿ, ಸ್ನಾತಕೋತ್ತರ ಪದವಿಯ ವಿವಿಧ ವಿಭಾಗಗಳಲ್ಲಿ ರ‍್ಯಾಂಕ್ ಪಡೆದ 74 ವಿದ್ಯಾರ್ಥಿಗಳಿಗೆ 94 ಚಿನ್ನದ ಪದಕ, ಮೂವರಿಗೆ ಡಿ.ಲಿಟ್ ಪದವಿ, 36 ಮಂದಿಗೆ ಪಿಎಚ್.ಡಿ ಹಾಗೂ 1,758 ಸ್ನಾತಕೋತ್ತರ, 10,230 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.
ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್ ಇತರರು ಪಾಲ್ಗೊಂಡಿದ್ದರು.