ಶನಿವಾರ, ಮೇ 8, 2021
25 °C

ತುಮಕೂರು ವಿವಿಯಿಂದ ಆಹಾರ ಸಾಮಗ್ರಿ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಲಾಕ್‌ಡೌನ್‌ನಿಂದ ತೊಂದರೆಗೆ ಒಳಗಾಗಿರುವ ಅಶಕ್ತರಿಗೆ ತುಮಕೂರು ವಿಶ್ವವಿದ್ಯಾಲಯದಿಂದ ಶುಕ್ರವಾರ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.

ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ವಿ.ವಿ ಮುಖ್ಯದ್ವಾರದ ಎದುರು ಆಹಾರದ ಕಿಟ್‍ಗಳನ್ನು ಸಾಂಕೇತಿಕವಾಗಿ ವಿತರಿಸಿದರು.

ಸ್ನಾತಕೋತ್ತರ ವಿಭಾಗಗಳ ಹಾಗೂ ಘಟಕ ಕಾಲೇಜುಗಳ ಉಪನ್ಯಾಸಕರ ದೇಣಿಗೆಯಾಗಿ ಈ ಕಾರ್ಯ ಕೈಗೊಳ್ಳಲಾಗಿದೆ. ಅವಶ್ಯಕತೆ ಉಳ್ಳವರಿಗೆ ಸಾಮಗ್ರಿ ನೀಡಲಾಗುತ್ತಿದೆ ಎಂದು ಕುಲಪತಿ ತಿಳಿಸಿದರು.

ಬಳಿಕ ವಿವಿ ಅಧಿಕಾರಿಗಳು ಹಾಗೂ ಪ್ರಾಧ್ಯಾಪಕರು ಬಿ.ಎಚ್.ಪಾಳ್ಯ ಸಮೀಪದ ಕಾಲೊನಿಗೆ ತೆರಳಿ ಆಹಾರ ಸಾಮಗ್ರಿಗಳನ್ನು ವಿತರಿಸಿದರು.

ಕುಲಸಚಿವ ಪ್ರೊ.ಕೆ.ಎನ್.ಗಂಗಾನಾಯಕ್, ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ಕೊಟ್ರೇಶ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು