ಮಂಗಳವಾರ, ಆಗಸ್ಟ್ 3, 2021
26 °C

ಏಕರೂಪಿ ಪಠ್ಯಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಗಳ ಪದವಿ ವಿದ್ಯಾರ್ಥಿಗಳಿಗೆ ಜಾರಿ ಮಾಡಲು ಹೊರಟಿರುವ ಏಕರೂಪಿ ಪಠ್ಯ ಯೋಜನೆಯನ್ನು ಕೈಬಿಡಬೇಕು ಎಂದು ಭಾರತೀಯ ಪ್ರಜಾಸತ್ತಾತ್ಮಕ ಯುವಜನ ಒಕ್ಕೂಟ (ಡಿವೈಎಫ್‌ಐ) ಮತ್ತು ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಆಗ್ರಹಿಸಿವೆ.

ಪ್ರತಿ ವಿಶ್ವವಿದ್ಯಾಲಯವು ಪ್ರಾದೇಶಿಕ ವೈವಿಧ್ಯತೆ, ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ ಅಸ್ಮಿತೆಯನ್ನು ಪ್ರತಿಬಿಂಬಿಸುತ್ತವೆ. ಅಲ್ಲಿ ರೂಪುಗೊಳ್ಳುವ ಪಠ್ಯಕ್ರಮವೂ ಬಹುಸಂಸ್ಕೃತಿಯ ದರ್ಪಣವಾಗಿರುತ್ತದೆ. ವಿದ್ಯಾರ್ಥಿಗಳ ಗ್ರಹಿಕೆಗೆ ಅನುಗುಣವಾದ ಕಲಿಕಾ ವಿಧಾನ ಅಳವಡಿಸಿಕೊಂಡಿರುತ್ತದೆ. ಹೀಗಿರುವಾಗ ಏಕ ಸಂಸ್ಕೃತಿಯ ಪಠ್ಯಕ್ರಮ ತಂದರೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಸಂಘಟನೆಗಳು ಆರೋಪಿಸಿವೆ.

ಇದರಿಂದ ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಕುತ್ತು ಬರಲಿದೆ. ಪಠ್ಯಪುಸ್ತಕ ರಚನೆ, ಶುಲ್ಕ ನಿಗದಿ, ಪ್ರಶ್ನೆಪತ್ರಿಕೆಗಳ ತಯಾರಿ, ಪರೀಕ್ಷೆ ನಡೆಸುವುದು, ಹೊಸ ಉದ್ಯೋಗ ಅವಕಾಶ ಸೃಷ್ಟಿ ಮತ್ತು ಅತಿಥಿ ಉಪನ್ಯಾಸಕರಿಗೆ ಕಂಟಕವಾಗಲಿದೆ ಎಂದು ಎಸ್‍ಎಫ್‍ಐ ಜಿಲ್ಲಾ ಘಟಕದ ಅಧ್ಯಕ್ಷ ಈ.ಶಿವಣ್ಣ, ಡಿವೈಎಫ್‍ಐ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರಾಘವೇಂದ್ರ, ಎಸ್‍ಎಫ್‍ಐ ನಗರ ಘಟಕದ ಅಧ್ಯಕ್ಷ ನವೀನ್ ದೂರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.