ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ನಿರೂಪಕ ಅಜಿತ್ ಹನುಮಕ್ಕನವರ್ ಭಾಷಣ, ಕೋಮು ಗಲಭೆಗೆ ಪ್ರಚೋದನೆ ಆರೋಪ

Published 25 ಆಗಸ್ಟ್ 2023, 13:45 IST
Last Updated 25 ಆಗಸ್ಟ್ 2023, 13:45 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ವಿಶ್ವವಿದ್ಯಾಲಯ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲು ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರಿಗೆ ಆಹ್ವಾನ ನೀಡಿದ್ದು ವಿವಾದಕ್ಕೆ ಒಳಗಾಗಿತ್ತು.

‘ಜಾತ್ಯತೀತ, ಸಾಮರಸ್ಯ, ಜ್ಞಾನ ದಾಹದ ಕೇಂದ್ರವಾಗಬೇಕಿದ್ದ ವಿಶ್ವವಿದ್ಯಾಲಯದಲ್ಲಿ ಕೋಮುವಾದದ ವಿಷ ಬೀಜ ಬಿತ್ತುವ, ವಿದ್ಯಾರ್ಥಿಗಳನ್ನು ಕೋಮು ಗಲಭೆಗಳಿಗೆ ಪ್ರಚೋದಿಸುವ ಕೆಲಸ ನಡೆಯುತ್ತಿದೆ’ ಎಂದು ಆರೋಪಿಸಿ ಲೇಖಕರು, ಚಿಂತಕರು, ಪ್ರಗತಿಪರರು ಅಸಮಾಧಾನ ವ್ಯಕ್ತಪಡಿಸಿದ್ದರು.

ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು. ವಿ.ವಿಗೆ ಬರಬಾರದು ಎಂದು ಒತ್ತಡ ಹಾಕಿದ್ದರು. ಯಾವ ವಿರೋಧವನ್ನೂ ಲೆಕ್ಕಿಸದೆ ಅಜಿತ್ ಹನುಮಕ್ಕನವರ್ ಅವರನ್ನು ಆಹ್ವಾನಿಸಿ, ಉಪನ್ಯಾಸ ನೀಡಲು ಅವಕಾಶ ಮಾಡಿಕೊಡಲಾಗಿತ್ತು. ಕಾರ್ಯಕ್ರಮದ ದಿನ ಕೆಲವು ಲೇಖಕರು ಮತ್ತು ಇತರರು ವಿ.ವಿ ಎದುರು ಪ್ರತಿಭಟನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT