ತುರುವೇಕೆರೆ: ತಾಲ್ಲೂಕು ರೈತ ಸಂಘ, ಹಸಿರು ಸೇನೆ, ಪ್ರಗತಿ ಪರ ಸಂಘಟನೆ, ದಸಂಸ ವತಿಯಿಂದ ಬಿ.ಸಿ ಕಾವಲ್ ಜಮೀನಿಗೆ ಸಂಬಂಧಿಸಿದ ನಕಲಿ ದಾಖಲಾತಿ ಸೃಷ್ಟಿ ಮಾಡಿರುವ ಅಧಿಕಾರಿಗಳು ಮತ್ತು ಭೂ ಮಾಫಿಯಾ ವಿರುದ್ಧ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ವಿವಿಧ ಸಂಘಟನೆಯ ಪದಾಧಿಕಾರಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಮಾತನಾಡಿ, ಬಿ.ಸಿ.ಕಾವಲ್ ಗ್ರಾಮದ ಸರ್ವೇ ನಂ 1ರಲ್ಲಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಮುಂದಾಗಿರುವುದು ಖಂಡನೀಯ ಎಂದರು.

ಅಲ್ಲಿನ ಸ್ಥಳೀಯ ರೈತರು ಹಲವು ವರ್ಷಗಳಿಂದ ಭೂಮಿ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಜತೆಗೆ ಸರ್ಕಾರದಿಂದ ಸಾಗುವಳಿ ಚೀಟಿ ಪಡೆದಿದ್ದಾರೆ. ಆದರೆ ಭೂ ಮಾಫಿಯ ಮತ್ತು ಕೆಲ ಸಂಘಟನೆಯ ವ್ಯಕ್ತಿಗಳು ಇದೇ ಸರ್ವೆ ನಂಬರ್ಗೆ ಸಂಬಂಧಿಸಿದ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದರು.

ಈ ಬಗ್ಗೆ ಪ್ರಶ್ನೆ ಮಾಡಲು ಬಂದವರ ಮೇಲೆ ಜಾತಿ ನಿಂದನೆ ಕೇಸು ಹಾಕುವ ಬೆದರಿಕೆಯೊಡ್ಡುತ್ತಿರುವ ಕಾರಣ ಕೆಲ ಅಧಿಕಾರಿಗಳು ಹೆದರುತ್ತಾರೆ. ಇದರಿಂದ ಅರ್ಹ ರೈತರು ಭೂಮಿ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಈ ಬಗ್ಗೆ ತಾಲ್ಲೂಕು ಆಡಳಿತ ಬೇಜವಾಬ್ದಾರಿ ತೋರದೆ ಸ್ಥಳೀಯ ರೈತರಿಗೆ ನ್ಯಾಯಕೊಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ಲಾವಣ್ಯ, ಜಿಲ್ಲಾ ಸಂಘಟನಾ ಸಂಚಾಲಕ ನಾಗರಾಜು, ಪದಾಧಿಕಾರಿ ಗೋವಿಂದಾರಜು ಟಿ.ಬಿ.ಕ್ರಾಸ್., ಬಸವರಾಜು, ತಮ್ಮಯ್ಯ, ಶಿವಣ್ಣ, ವಿನಯ್, ಸಂತೋಷ್, ಕೆಂಪಣ್ಣ, ಅಫ್ಝಲ್, ಚಿದಾನಂದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-17-311356238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.