ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ ಅಂಚಿಹಳ್ಳಿ ಅರಣ್ಯ ಭಾಗದಲ್ಲಿ ನಡೆದಿದ್ದ ಮುತ್ತಗದಹಳ್ಳಿಯ ಶ್ವೇತಾ (26) ಕೊಲೆ ಪ್ರಕರಣದ ಆರೋಪಿಯನ್ನು ತುರುವೇಕೆರೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮುತ್ತಗದಹಳ್ಳಿಯ ಭಾನುಪ್ರಕಾಶ್ (53) ಕೊಲೆ ಆರೋಪಿ. ವಿವಾಹಿತೆಯಾಗಿದ್ದ ಶ್ವೇತಾಗೆ ಇಬ್ಬರು ಮಕ್ಕಳಿದ್ದರು. ಮದುವೆ ನಂತರ ಭಾನುಪ್ರಕಾಶ್ ಜತೆಗೆ ಅಕ್ರಮ ಸಂಬಂಧ ಹೊಂದಿದ್ದರು. ದಿನ ಕಳೆದಂತೆ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು. ಇದರಿಂದ ಕೋಪಗೊಂಡ ಭಾನುಪ್ರಕಾಶ್ ಕೃತ್ಯ ಎಸಗಿದ್ದ ಎಂಬುವುದು ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ.

ಅಂಚಿಹಳ್ಳಿ ಅರಣ್ಯ ಪ್ರದೇಶದಲ್ಲಿ ಜ. 30ರಂದು ಸುಟ್ಟ ಸ್ಥಿತಿಯಲ್ಲಿ ಶ್ವೇತಾ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ತುರುವೇಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಘಟನೆ ನಂತರ ಶ್ವೇತಾ ಕಾಣೆಯಾದ ಬಗ್ಗೆ ಅವರ ತಾಯಿ ಠಾಣೆಗೆ ದೂರು ನೀಡಿದ್ದರು.

ಶ್ವೇತಾ, ತಾಯಿ ಮತ್ತು ಅಜ್ಜಿಯ ಡಿಎನ್ಎ ಪರೀಕ್ಷೆ ಮಾಡಲಾಗಿತ್ತು. ವರದಿಯಲ್ಲಿ ಮೃತಪಟ್ಟಿರುವುದು ಶ್ವೇತಾ ಎಂಬುವುದು ಖಚಿತಪಟ್ಟಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕೊಲೆಯ ರಹಸ್ಯ ಗೊತ್ತಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-17-1376795957

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.