ತುರುವೇಕೆರೆ: ಇಲ್ಲಿನ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸ್ವಪ್ನಾನಟೇಶ್ ಅವಿರೋಧವಾಗಿ ಬುಧವಾರ ಆಯ್ಕೆಯಾದರು.

ಈ ಹಿಂದಿನ ಅಧ್ಯಕ್ಷರಾಗಿದ್ದ ಆಶಾರಾಜಶೇಖರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನೆಡೆಯಿತು. 14 ಸದಸ್ಯರ ಬಲ ಹೊಂದಿರುವ ಪಟ್ಟಣ ಪಂಚಾಯಿತಿಯಲ್ಲಿ ಸ್ವಪ್ಪಾನಟೇಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂ.ಞ ಅಹಮದ್ ಅವಿರೋಧವೆಂದು ಘೋಷಿಸಿದರು.

ಸ್ವಪ್ಪಾನಟೇಶ್ ಮಾತನಾಡಿ, ‘ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ನನ್ನ ತಂದೆ ಕನಸನ್ನು ನನಸು ಮಾಡಿದ್ದೇನೆ. ನನ್ನ ಅವಧಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೆಲ್ಲರನ್ನೂ ವಿಶ್ವಾಸಕ್ಕೆ ಪಡೆದು ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು’ ಎಂದು ತಿಳಿಸಿದರು.

ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನಂತರ ಪಟ್ಟಣದಲ್ಲಿ ಮೆರವಣಿಗೆ ನೆಡೆಸಿದರು.

ಉಪಾಧ್ಯಕ್ಷೆ ಕೆ.ಭಾಗ್ಯಮ್ಮ, ಸದಸ್ಯರಾದ ಯಜಮಾನ್ ಮಹೇಶ್, ಅಂಜನ್ ಕುಮಾರ್, ಚಿದಾನಂದ್, ಆಶಾ, ಪ್ರಭಾಕರ್, ಎನ್.ಆರ್.ಸುರೇಶ್, ರವಿ, ಮಧು, ನದೀಂ, ಜಯಮ್ಮ, ಶೀಲಾ, ಮೇಘನಾ, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಮಾಜಿ ಶಾಸಕ ಎಚ್.ಬಿ.ನಂಜೇಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.