ತುರುವೇಕೆರೆ: ವಿದ್ಯಾರ್ಥಿಗಳು ಸಂವಿಧಾನದ ಮೂಲ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಾಗಬೇಕು ಎಂದು ತಹಶೀಲ್ದಾರ್ ಕುಂಞಅಹಮದ್ ಹೇಳಿದರು.

ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ವೈಟಿ ರಸ್ತೆಯಲ್ಲಿನ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಜಗತ್ತಿನಲ್ಲೇ ಅತ್ಯುತ್ತಮವಾದ ಸಂವಿಧಾನ ನೀಡಿದ ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ ಅವಿಸ್ಮರಣೀಯ. ಭವಿಷ್ಯ ಭಾರತದ ನಿರ್ಮಾತೃಗಳಾದ ವಿದ್ಯಾರ್ಥಿಗಳು ಸಂವಿಧಾನ ಓದಿ ಅದರಲ್ಲಿರುವ ಹಕ್ಕು, ಕರ್ತವ್ಯ, ಮತದಾನ, ಚುನಾವಣ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಮಹತ್ವ ಅರಿತುಕೊಳ್ಳಬೇಕು. ಎಂದು ಸಲಹೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನಾ ಸಂವಿಧಾನದ ಪೂರ್ವ ಪೀಠಿಕೆಯನ್ನು ವಿಶೇಷ ವಾಹನದಲ್ಲಿ ಇರಿಸಿ, ಪಟ್ಟಣದ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಇಲ್ಲಿನ ಪ್ರವಾಸಿ ಮಂದಿರದಿಂದ ವೇದಿಕೆ ಕಾರ್ಯಕ್ರಮದವರೆಗೂ ಮೆರವಣಿಗೆ ನಡೆಸಿದರು. ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ರಾಜು ಇ. ಸಂವಿಧಾನ ಬಗ್ಗೆ ಉಪನ್ಯಾಸ ನೀಡಿದರು. ನಂತರ ಪ್ರತಿಭಾವಂತ ಮಕ್ಕಳಿಗೆ ಸಂವಿಧಾನದ ಪುಸ್ತಕ ನೀಡುವ ಮೂಲಕ ಸನ್ಮಾನ ಮಾಡಲಾಯಿತು.

ಇ.ಒ ಪಿ.ಎಸ್.ಅನಂತರಾಜು, ಪಟ್ಟಣ ಪಂಚಾಯಿತಿ ಸದಸ್ಯ ಚಿದಾನಂದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಂ.ಶಿವಲಿಂಗಯ್ಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂಜಾ ಬಿ., ಮೀನಿಗಾರಿಕೆ ಇಲಾಖೆ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಷಣ್ಮುಖಪ್ಪ, ದಸಂಸ ಮುಖಂಡರಾದ ವಿ.ಟಿ.ವೆಂಕಟರಾಮು, ದಂಡಿನಶಿವರ ಕುಮಾರ್, ಗುರುದತ್, ಬಿಗಿನೇಹಳ್ಳಿ ಪುಟರಾಜು, ತೊರೆಮಾವಿನಹಳ್ಳಿ ಚಂದ್ರಯ್ಯ, ಬಿಆರ್ಸಿ ಸುರೇಶ್ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.