ತುರುವೇಕೆರೆ: ಜನರು ತಮ್ಮ ಮನೆಯ ವಾಸ್ತುವಿಗಾಗಿ ತಲೆಕೆಡಿಸಿಕೊಂಡಷ್ಟು ತಮ್ಮ ಮನಸ್ಸಿನ ವಾಸ್ತುವಿನ ಕಡೆ ಗಮನ ಹರಿಸಿ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜು ಹೇಳಿದರು.

ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಹುಲಿಕಲ್ ಗ್ರಾಮದಲ್ಲಿ ನಡೆದ ಪವಾಡ ಬಯಲು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯ ಮೂಢನಂಬಿಕೆಗಳನ್ನು ಬದಿಗೊತ್ತಿ ವಿಜ್ಞಾನ ಹಾಗೂ ವೈಜ್ಞಾನಿಕ ವಿಷಯಗಳ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ. ವಿಜ್ಞಾನ ಬೆಳೆಯುತ್ತಿದೆ. ಆದರೆ ಮನಸ್ಸು ಖಿನ್ನತೆಗೆ ಜಾರುತ್ತಿದೆ. ಇಂತಹ ದುರ್ಬಲ ಮನಸ್ಸನ್ನು ಬಳಸಿಕೊಳ್ಳುವ ಜನ ಅನೇಕರಿದ್ದಾರೆ ಎಂದು ಎಚ್ಚರಿಸಿದರು.

ಪಂಚಾಂಗಕ್ಕಿಂತ ಪಂಚ ಅಂಗಗಳ ಕಡೆಗೆ ಹೆಚ್ಚು ಒತ್ತು ನೀಡಬೇಕಿದೆ. ಹಿಂದೆ ತಿನ್ನುವ ಆಸೆಯಿತ್ತು ಆಹಾರ ಇರಲಿಲ್ಲ. ಈಗ ಆಹಾರ ಇದೆ ಆದರೆ ತಿನ್ನಲಿಕ್ಕೆ ಆಗ್ತಾ ಇಲ್ಲಾ. ಸಂತೋಷ ಇದೆ. ಅದನ್ನು ಅನುಭವಿಸಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಾಧನೆ ಸಾಧಕನ ಸ್ವತ್ತು. ಅದನ್ನು ಬೇರೆಯವರು ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದರು.

ಹುಲಿಕಲ್ ನಟರಾಜು ದಂಪತಿ ಹಾಗೂ ಇತರೆ ಕಲಾವಿದರನ್ನು ಸನ್ಮಾನಿಸಲಾಯಿತು. ಬೆಂಗಳೂರು ಅಕ್ಷಯ ಸ್ಕೂಲ್ ಆಫ್ ಆರ್ಟ್ಸ್ ತಂಡದಿಂದ ಭರತನಾಟ್ಯ ಹಾಗೂ ಜಾನಪದ ನೃತ್ಯ ನಡೆಯಿತು.

ಅಧ್ಯಕ್ಷರಾದ ಬಾಲಕೃಷ್ಣ, ಉಪಾಧ್ಯಕ್ಷ ಸತೀಶ್ ಕುಮಾರ್, ಗುಡಿಗೌಡ ಸುನಿಲ್ ಕುಮಾರ್, ಕಾರ್ಯದರ್ಶಿ ಗಂಗೇಗೌಡ, ಸಮಿತಿ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-17-937619582

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.