ತುರುವೇಕೆರೆ: ತಾಲ್ಲೂಕು ಕಚೇರಿಯಲ್ಲಿ ತಾಲೂಕು ಆಡಳಿತದಿಂದ ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಎಲ್ಲ ಅಂಬೇಡ್ಕರ್ ಅಭಿಮಾನಿಗಳು ತಪ್ಪದೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಸಂಚಾಲಕ ಕೃಷ್ಣಸ್ವಾಮಿ ತಿಳಿಸಿದರು.

ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಏಪ್ರಿಲ್ 14ರಂದು ನಡೆಯುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ತಾಲ್ಲೂಕು ಆಡಳಿತದ ಜೊತೆಗೆ ಭೀಮೋತ್ಸವ ಸಮಿತಿ, ಎಲ್ಲ ದಲಿತ ಮುಖಂಡರು ಮತ್ತು ಪ್ರಗತಿಪರ ಮುಖಂಡರು ಸೇರಿ ಬಹಳ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಯಂತಿ ಅಂಗವಾಗಿ ವಿವಿಧ ಜಾನಪದ ಕಲಾತಂಡಗಳು ಆಗಮಿಸಲಿವೆ.

ಪಟ್ಟಣದ ಪ್ರವಾಸಿ ಮಂದಿರದಿಂದ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ. ಜಯಂತಿಯಲ್ಲಿ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಭಿತ್ತಿಚಿತ್ರಗಳ ಪ್ರದರ್ಶನವೂ ನಡೆಯಲಿದೆ.

ದಲಿತ ಮುಖಂಡರಾದ ದೊಂಕಿಹಳ್ಳಿ ರಾಮಣ್ಣ, ಕುಣಿಕೇನಹಳ್ಳಿ ಜಗದೀಶ್, ಸುಬ್ಬಣ್ಣ, ಲೋಕೇಶ್, ದೇವರಾಜು, ತಿಮ್ಮಯ್ಯ, ಪ್ರಸಾದ್, ಕನ್ನಡದ ಕಂದ ವೆಂಕಟೇಶ್ ಇತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-17-1478154780

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.