ತಿಪಟೂರು: ‘ಸೇವಾ ಭದ್ರತೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಟ್ವಿಟರ್ ಅಭಿಯಾನ ನಡೆಸಲಾಗುತ್ತಿದೆ. ಈ ಮೂಲಕ ಸರ್ಕಾರಕ್ಕೆ ನಮ್ಮ ಸಮಸ್ಯೆಗಳ ಗಮನ ಸೆಳೆಯಲು ಪ್ರಯತ್ನಿಸಲಾಗಿದೆ’ ಎಂದು ಸಂಘದ ಸಂಯೋಜಕ ಡಾ. ವೆಂಕಟೇಶ್ ಎಲ್.ಎಂ. ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಅನೇಕ ವರ್ಷಗಳಿಂದ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಆದಾಗ್ಯೂ ಸೇವಾ ಭದ್ರತೆ ಇಲ್ಲ. 14,500 ಅತಿಥಿ ಉಪನ್ಯಾಸಕರ ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ. ಮಾರ್ಚ್ 18ರಿಂದ ಇಲ್ಲಿಯವರೆಗೆ ಸಾವಿರಾರು ಮನವಿ ಇಲಾಖೆಗೆ, ಮಂತ್ರಿಮಂಡಲಕ್ಕೆ ಮತ್ತು ಮುಖ್ಯಮಂತ್ರಿಗೆ ನೀಡಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಅತಿಥಿ ಶಿಕ್ಷಕರ ನೆರವಿಗೆ ಬರದಿದ್ದರೆ, ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಸುಧಾ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಶಿವಣ್ಣ ಬಿ.ಸಿ., ಡಾ. ಮೋಹನ್, ಜಂಟಿ ಕಾರ್ಯದರ್ಶಿ ಅರುಣ್ ಕುಮಾರ್, ಕಾರ್ಯದರ್ಶಿ ಜ್ಯೋತಿ, ಸಹಕಾರ್ಯದರ್ಶಿ ಸಿದ್ದಲಿಂಗಮೂರ್ತಿ, ಖಜಾಂಚಿ ಮಹೇಶ್, ಹೇಮಲತ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.