ಕುಣಿಗಲ್: ತಾಲ್ಲೂಕಿನ ಗಿರಿಗೌಡನಪಾಳ್ಯ ಬಳಿಯ ರಾಜ್ಯ ಹೆದ್ದಾರಿ 33 ರಲ್ಲಿ ಶುಕ್ರವಾರ ರಾತ್ರಿ ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ, ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ತಾಲ್ಲೂಕಿನ ಟಿ.ಹೊಸಹಳ್ಳಿ ಗ್ರಾಮದ ಯೋಗೇಶ್ (22), ಶ್ರೀನಿವಾಸ (22) ಮೃತರು. ಕಾರ್ಯ ನಿಮಿತ್ತ ಕುಣಿಗಲ್ ಗೆ ಬರುತ್ತಿದ್ದಾಗ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.