ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಪೆರಮಸಂದ್ರ ಗ್ರಾಮದಲ್ಲಿ ಬುಧವಾರ ತಡರಾತ್ರಿ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಎರಡು ಎಮ್ಮೆ ಮೃತಪಟ್ಟು, ಮೂರು ಎಮ್ಮೆ ಗಂಭೀರವಾಗಿ ಗಾಯಗೊಂಡಿವೆ.
ಗ್ರಾಮದ ಯೋಗೀಶ್ ಕುಟುಂಬ ಹೈನುಗಾರಿಕೆಯಲ್ಲಿ ತೊಡಗಿದೆ. ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿ ಶೇಖರಿಸಿಟ್ಟಿದ್ದ ಮೇವು ಹಾಗೂ ಬೂಸ ಬೆಂಕಿಗೆ ಆಹುತಿಯಾಗಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಹಾಗೂ ಪಶುವೈದ್ಯಾಧಿಕಾರಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.