ಮಟಕಾ, ಜೂಜಾಟ ನಡೆಸುವವರೊಂದಿಗೆ ಶಾಮೀಲಾದ ಇಬ್ಬರು ಕಾನ್‌ಸ್ಟೆಬಲ್ ಅಮಾನತು

ಶುಕ್ರವಾರ, ಮೇ 24, 2019
33 °C
ಮಟಕಾ, ಜೂಜಾಟ ಆಡಿಸುವವರೊಂದಿಗೆ ಶಾಮೀಲು, ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ್ದ ಸಂಭಾಷಣೆ

ಮಟಕಾ, ಜೂಜಾಟ ನಡೆಸುವವರೊಂದಿಗೆ ಶಾಮೀಲಾದ ಇಬ್ಬರು ಕಾನ್‌ಸ್ಟೆಬಲ್ ಅಮಾನತು

Published:
Updated:

ತುಮಕೂರು: ಮಟಕಾ, ಜೂಜಾಟ ನಡೆಸುವವರೊಂದಿಗೆ ಶಾಮೀಲಾಗಿ ಕರ್ತವ್ಯ ಲೋಪ ಎಸಗಿ, ದುರ್ನಡತೆಯಿಂದ ನಡೆದುಕೊಂಡ ಕಾರಣಕ್ಕೆ ಪಾವಗಡ ತಾಲ್ಲೂಕು ಅರಸೀಕೆರೆ ಪೊಲೀಸ್ ಠಾಣೆ ಸಿಬ್ಬಂದಿ ಮಂಜುನಾಥ್ ಕೂಲಾಲ ಹಾಗೂ ಡಿ.ಉಮೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಅಮಾನತು ಮಾಡಿದ್ದಾರೆ.

ಇಲಾಖೆಯಲ್ಲಿ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ಹಾಗೂ ಲೋಪವೆಸಗಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಜಿಲ್ಲಾ ಪೊಲೀಸ್ ಕಚೇರಿಯ ಪತ್ತೆ ದಳದಿಂದ ಮಾಹಿತಿ ಸಂಗ್ರಹಿಸಿ ಜಿಲ್ಲೆಯ ಯಾವುದೇ ಮೂಲೆಯಲ್ಲಿ ಅಕ್ರಮ ಜೂಜಾಟ, ಮಟಕಾ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಜರುಗಿಸಲಾಗುವುದು. ಆಯಾ ಠಾಣಾ ಎಸ್‌.ಬಿ. ಸಿಬ್ಬಂದಿ ಹಾಗೂ ಠಾಣಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !