ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು:101 ಮಂದಿಗೆ ಸೋಂಕು, ಇಬ್ಬರು ಸಾವು

ಜಿಲ್ಲೆಯಲ್ಲಿ ಮುಂದುವರಿದ ಸೋಂಕಿತರ ಸರಣಿ, ತುಮಕೂರು ತಾಲ್ಲೂಕಿನಲ್ಲಿ ಹೆಚ್ಚು ಪ್ರಕರಣ
Last Updated 31 ಜುಲೈ 2020, 16:24 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಮೃತಪಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಶುಕ್ರವಾರ 101 ಮಂದಿಗೆ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಪರಿಸ್ಥಿತಿ ನಿಭಾಯಿಸಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

ತುಮಕೂರು ನಗರದಲ್ಲಿ 40 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೆ ಜಿಲ್ಲೆಯಲ್ಲಿ 1718 ಮಂದಿಗೆ ಸೋಂಕು ತಗುಲಿದ್ದು, ಅದರಲ್ಲಿ ತುಮಕೂರು ನಗರವೊಂದರಲ್ಲೇ 745 ಮಂದಿ ಸೇರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 54 ಮಂದಿ ಮೃತಪಟ್ಟಿದ್ದು, ಅದರಲ್ಲಿ ತುಮಕೂರು ತಾಲ್ಲೂಕಿನವರೇ 37 ಮಂದಿ ಇದ್ದಾರೆ.

ಇಬ್ಬರು ಸಾವು: ತುಮಕೂರು ನಗರದ 52 ವರ್ಷದ ವ್ಯಕ್ತಿ, ಮಧುಗಿರಿ ತಾಲ್ಲೂಕು ಕೊಡಗದಾಲ 75 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT