ಕುಣಿಗಲ್: ತಾಲ್ಲೂಕಿನ ವ್ಯಾಪ್ತಿಯಲ್ಲಿ ಭಾನುವಾರ ಬೆಳಗಿನ ಜಾವ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಚಿಕ್ಕಮಳಲವಾಡಿ ಗ್ರಾಮದ ಬಳಿ ನಾಯಿ ಅಡ್ಡ ಬಂದಿದ್ದು, ಬೈಕ್ ಆಯತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಂಗಯ್ಯನಪಾಳ್ಯದ ಧನಂಜಯ (30) ಮೃತಪಟ್ಟಿದ್ದಾರೆ.

ತಾಲ್ಲೂಕಿನ ಅಂಚೆಪಾಳ್ಯದ ಹತ್ತಿರ ರಸ್ತೆಯ ಉಬ್ಬು ದಾಟುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ನರಸಿಂಹ (35) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಸೇರಿದಂತೆ ಸಹ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ತುಮಕೂರು ತಾಲ್ಲೂಕಿನ ಹೆಬ್ಬೂರು ಬಳಿಯ ಚಿಕ್ಕಣ್ಣಸ್ವಾಮಿ ದೇವಾಲಯಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.