ಶನಿವಾರ, ಜನವರಿ 28, 2023
24 °C

ಕಾರುಗಳ ನಡುವೆ ಅಪಘಾತ: ಇಬ್ಬರು ಮಹಿಳೆಯರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತುಮಕೂರು– ಕೊರಟಗೆರೆ ರಸ್ತೆಯ ಜಟ್ಟಿ ಅಗ್ರಹಾರದ ಬಳಿ ಬುಧವಾರ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಮಧುಗಿರಿ ತಾಲ್ಲೂಕಿನ ಕೊಡಗಾರಹಳ್ಳಿಯ ಗುಲ್ಶೀರ್ (50), ಮಧುಗಿರಿ ಪಟ್ಟಣದ ಜರೀನಾ (42) ಮೃತಪಟ್ಟವರು. ನಾಲ್ವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯ ಹೆದ್ದಾರಿಯ ತಿರುವಿನಲ್ಲಿ ನಡೆದ ಅಪಘಾತದ ರಭಸಕ್ಕೆ ಎರಡು ಕಾರುಗಳ ಗಾಜುಗಳು ಪುಡಿಪುಡಿ ಆಗಿವೆ. ವಾಹನಗಳ ಅತಿವೇಗ, ಚಾಲಕರ ಅಜಾಗರೂಕತೆ ಚಾಲನೆಯಿಂದ ಅಪಘಾತ ಸಂಭವಿಸಿದೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಕೊರಟಗೆರೆ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು