ಚಿಕ್ಕನಾಯಕನಹಳ್ಳಿ: ಪಟ್ಟಣಕ್ಕೆ ಒಳಚರಂಡಿ (ಯುಜಿಡಿ) ನಿರ್ಮಾಣಕ್ಕೆ ₹68 ಲಕ್ಷ ಬಿಡುಗಡೆಯಾಗಿ ವರ್ಷ ಕಳೆದಿದೆ. ಆದರೆ ತ್ಯಾಜ್ಯ ಶೇಖರಣಾ ಘಟಕ ಪರಿಪೂರ್ಣ ಆಗಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ಒಳಚರಂಡಿ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿಲ್ಲ. ಪ್ರಥಮಿಕ ಹಂತದ ತ್ಯಾಜ್ಯ ಘಟಕವೇ ಪೂರ್ಣಗೊಂಡಿಲ್ಲ. ಪೈಪ್ಲೈನ್ ಆಗದೆ ರಸ್ತೆ ಕಾಮಗಾರಿ ಆರಂಭಿಸುವಂತಿಲ್ಲ ಎಂದರು.

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾದ ಸೌಲಭ್ಯಗಳು ಇದ್ದರೂ ಸಾರ್ವಜನಿಕರಿಗೆ ಅದರ ಉಪಯೋಗವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಎಲ್ಲ ಉಪಕರಣಗಳಿದ್ದರೂ ರೋಗಿಗಳು ಬೇರೆಡೆ ಹೋಗುತ್ತಿದ್ದಾರೆ. ಇದಕ್ಕೆ ಕಾರಣವೇನು, ಇಲ್ಲಿ ಚಿಕಿತ್ಸೆ ದೊರೆಯುವುದಿಲ್ಲವೇ ಎಂದು ವೈದ್ಯರನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯಲ್ಲಿ ಎಲ್ಲ ಅನುಕೂಲಗಳಿವೆ ಆದರೂ ವ್ಯವಸ್ಥೆ ಬಗ್ಗೆ ಸಾರ್ವಜನಿಕರು ದೂರುತ್ತಾರೆ ಎಂದು ಬೇಸರಿಸಿದರು.

‘ಆಸ್ಪತ್ರೆಗೆ ರೋಗಿಗಳು ತುರ್ತು ಎಂದು ಬಂದರೆ ವೈದ್ಯರು ಮೊಬೈಲ್ ಹಿಡಿದುಕೊಂಡು ಬೇರೆಡೆ ಹೋಗುತ್ತಾರೆ. ಇಂತಹ ವ್ಯವಸ್ಥೆಯನ್ನು ವೈದ್ಯರು ಬದಲಿಸಿಸಬೇಕು. ರೋಗಿಗಳಿಗೆ ಆಸ್ಪತ್ರೆಯ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು’ ಎಂದು ವೈದ್ಯರಿಗೆ ಸೂಚಿಸಿದರು.

‘ಶಿಶು ಮರಣ ಪ್ರಮಾಣ ಹೆಚ್ಚುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಗಮನಿಸುತ್ತಿಲ್ಲ. ನಾನು ಶಾಸಕನಾಗಿದ್ದ ಸಮಯದಲ್ಲಿ 3ಮಂದಿ ವೈದ್ಯರಿದ್ದರು. ಈಗ 11ಮಂದಿ ವೈದ್ಯರಿದ್ದರೂ, ರೋಗಿಗಳಿಗೆ ಸರಿಯಾದ ನಿರ್ವಹಣೆಯಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಔಷಧಿ ಕೊರತೆ ಇಲ್ಲ. ಎಕ್ಸ್ ರೇ, ಡಯಾಲಿಸಿಸ್, ವೆಂಟಿಲೇಟರ್ ಸೌಲಭ್ಯಗಳಿವೆ’ ಎಂದರು.

ಸಭೆಯಲ್ಲಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಅತಿಕ್ ಪಾಷ, ತಾ.ಪಂ.ಅಧ್ಯಕ್ಷೆ ಜಯಮ್ಮ, ಜಿ.ಪಂ.ಸದಸ್ಯ ರಾಮಚಂದ್ರಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.