ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಟ್ಟನಾಯಕನಹಳ್ಳಿ ಮಠಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

Published 17 ಜೂನ್ 2024, 14:09 IST
Last Updated 17 ಜೂನ್ 2024, 14:09 IST
ಅಕ್ಷರ ಗಾತ್ರ

ಪಟ್ಟನಾಯಕನಹಳ್ಳಿ: ಇಲ್ಲಿನ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠಕ್ಕೆ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಶೀರ್ವಾದ ಪಡೆದರು.

ಬೆಳಗ್ಗೆ 11.30ರ ಸುಮಾರಿಗೆ ಆಗಮಿಸಿ ಕ್ಷೇತ್ರದ ಓಂಕಾರೇಶ್ವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಮಾತನಾಡಿ, ‘ರಾಜ್ಯದ ದನಿಯಾಗಿ ಕೇಂದ್ರ ಸರ್ಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ. ಒಕ್ಕೂಟದ ವ್ಯವಸ್ಥೆ ಭಾಗವಾಗಿ ಕೇಂದ್ರ ಸರ್ಕಾರದ ಅನುದಾನವನ್ನು ರಾಜ್ಯಕ್ಕೆ ಹೆಚ್ಚಿನ ಮಟ್ಟದಲ್ಲಿ ತರುತ್ತೇನೆ’ ಎಂದರು.

ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಚಿದಾನಂದ್ ಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ವೀರಭದ್ರಯ್ಯ, ಸತ್ಯಪ್ರಕಾಶ್, ಅರ್.ಉಗ್ರೇಶ್, ಎಸ್.ಆರ್.ಗೌಡ, ರಾಮಕೃಷ್ಣ, ತಿಪ್ಪೇಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT