ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಕೃಷ್ಣ ಹೇಳಿದ ಎಲ್ಲ ತಂತ್ರಗಾರಿಕೆ ಬಳಸಿ, ಚುನಾವಣೆ ಎದುರಿಸಿ: ಈಶ್ವರಪ್ಪ

ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಸಚಿವ ಕೆ.ಎಸ್. ಈಶ್ವರಪ್ಪ ಸಲಹೆ
Last Updated 4 ಡಿಸೆಂಬರ್ 2020, 2:08 IST
ಅಕ್ಷರ ಗಾತ್ರ

ತಿಪಟೂರು: ‘ಶ್ರೀಕೃಷ್ಣ ಹೇಳಿದ ಎಲ್ಲ ತಂತ್ರಗಾರಿಕೆಯನ್ನು ಬಳಸಿ ಗ್ರಾಮಪಂಚಾಯತಿ ಚುನಾವಣೆ ಗೆಲ್ಲಬೇಕು’ ಎಂದು ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದರು.

ನಗರದಲ್ಲಿ ಗುರುವಾರ ನಡೆದ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಚುನಾವಣೆ ಘೋಷಣೆ
ಯಾಗುತ್ತಿದ್ದಂತೆ ಕಾಂಗ್ರೆಸಿಗರಿಗೆ ಭಯದ ಹೆಚ್ಚುತ್ತದೆ. ಚುನಾವಣೆ ಎಂದರೆ ಬಿಜೆಪಿ ಗೆಲುವು ಕಾಂಗ್ರೆಸ್ ಸೋಲು ಎಂದು ನಿರ್ಣಯವಾಗಿದೆ ಎಂದರು.

ರಾಜ್ಯದ ಶೇ 80ರಷ್ಟು ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಅಭ್ಯರ್ಥಿ ಆಯ್ಕೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣ ಅಧಿಕಾರ ಸಿಗುವಂತಾಗಬೇಕು ಎಂದರು.

ಮಾದರಿ ಗ್ರಾಮಗಳಾಗಿಸಲು ಕೇಂದ್ರ ಸರ್ಕಾರ ಲಕ್ಷಾಂತರ ಕೋಟಿ ವ್ಯಯಿಸುತ್ತಿದೆ. ದೇಶದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ನರೇಗಾ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿ
ಯಲ್ಲಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ‘ಬಿಜೆಪಿಯಿಂದ ಸ್ಪರ್ಧಿಸಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಅದನ್ನು ಸ್ಥಳೀಯಮಟ್ಟದಲ್ಲಿಯೇ ಬಗೆಹರಿಸಿಕೊಂಡು ಒಟ್ಟಾಗಿ ಚುನಾವಣೆ ಎದುರಿಸಬೇಕಿದೆ. ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿಲ್ಲ ಕೇವಲ 4 ಶಾಸಕರು ಇದ್ದಾರೆ. ಈಶ್ವರಪ್ಪ ಅವರೊಂದಿಗೆ ಚರ್ಚಿಸಿ ಹೆಚ್ಚಿನ ಆದ್ಯತೆ ನೀಡಿ ಚುನಾವಣೆ ಎದುರಿಸುತ್ತಿದ್ದೇವೆ. ಪಕ್ಷದ ಕಾರ್ಯಕರ್ತರಲ್ಲಿಯೇ ಪೈಪೋಟಿ ಶುರುವಾದರೆ ಕಷ್ಟವಾಗುತ್ತದೆ. ಏಕೆಂದರೆ ಎದುರಾಳಿಗಳಿಗೆ ನಾವು ಹೆದರುತ್ತಿಲ್ಲ. ನಮ್ಮಲ್ಲೇ ಒಡಕುಂಟಾದರೆ ಕಷ್ಟವಾಗುತ್ತದೆ ಎಂದರು.

ಸಂಸದ ಪ್ರತಾಪ ಸಿಂಹ ಮಾತನಾಡಿ, ‘13ನೇ ಹಣಕಾಸು ಆಯೋಗದ ಅನುದಾನದಲ್ಲಿ ಜಿಲ್ಲಾ ಪಂಚಾಯಿತಿಗೆ ಸಿಂಹಪಾಲು ಇತ್ತು. ನಂತರ 14 ಮತ್ತು 15ನೇ ಹಣಕಾಸು ಆಯೋಗದಲ್ಲಿ ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ಹಣ ನೀಡಲಾಯಿತು. ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಶಕ್ತಿ ಅನುಸಾರ ಕೆಲಸ ಮಾಡಿ ಹಣ ಪಡೆದುಕೊಂಡು ಉತ್ತಮ ಜೀವನ ಸಾಗಿಸುತ್ತಿದ್ದಾರೆ. ಪಂಚಾಯಿತಿಗಳಲ್ಲಿನ ಕ್ರಿಯಾಯೋಜನೆಗೆ ನೇರವಾಗಿ ಹಣ ಬರುತ್ತಿದ್ದು ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ’ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್‍ಗೌಡ ಮಾತನಾಡಿದರು. ಸಂಸದರಾದ ಜಿ.ಎಸ್.ಬಸವರಾಜು, ನಾರಾಯಣಸ್ವಾಮಿ, ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಬಿ.ಸಿ.ನಾಗೇಶ್, ಜ್ಯೋತಿ ಗಣೇಶ್, ಮಸಲಾ ಜಯರಾಂ, ಮಾಜಿ ಶಾಸಕ ಕಿರಣ್ ಕುಮಾರ್, ಹುಲಿನಾಯ್ಕ, ರಾಜ್ಯ ಪದಾಧಿಕಾರಿ ಎಂ.ಬಿ.ನಂದೀಶ್, ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ, ಸಂಚಾಲಕ ಮುನಿರಾಜು, ಹಿರಿಯ ಮುಖಂಡ ಹುಚ್ಚಯ್ಯ, ಜಿಲ್ಲಾ ಕಾರ್ಯದರ್ಶಿ ಬಿಸಲೇಹಳ್ಳಿ ಜಗದೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT