ಕೃಷಿ ಮಂಥನ ಬಡ ವಿದ್ಯಾರ್ಥಿಗಳಿಗೆ ಉಪಯುಕ್ತ

ಶನಿವಾರ, ಮೇ 25, 2019
32 °C

ಕೃಷಿ ಮಂಥನ ಬಡ ವಿದ್ಯಾರ್ಥಿಗಳಿಗೆ ಉಪಯುಕ್ತ

Published:
Updated:
Prajavani

ತುಮಕೂರು: ‘ವಿದ್ಯಾರ್ಥಿಗಳಿಗೆ ಅತ್ಯುಪಯುಕ್ತ ಮತ್ತು ರಚನಾತ್ಮಕವಾದ ಕೃಷಿ ಮಂಥನ ಉಚಿತ ತರಬೇತಿ ಶಿಬಿರ ಆಯೋಜಿಸಿರುವುದು ಉಪಯುಕ್ತವಾದುದು’ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಧೀರಾನಂದ ನುಡಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ ಪದವಿ ಪ್ರವೇಶ ಪ್ರಾಯೋಗಿಕ ಪರೀಕ್ಷೆಗಾಗಿ ಉಚಿತ ತರಬೇತಿ ಶಿಬಿರ ಕೃಷಿ ಮಂಥನ ಉದ್ಘಾಟಿಸಿ ಮಾತನಾಡಿದರು.

‘ಇಂತಹ ಶಿಬಿರಗಳು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಪ್ರತಿಯೊಬ್ಬರು ಬದುಕಿನಲ್ಲಿ ಸಕಾರಾತ್ಮಕ ಗುಣ ಅಳವಡಿಸಿಕೊಳ್ಳಬೇಕು. ವಿವೇಕಾನಂದರು ತೋರಿದ ಮಾರ್ಗದಲ್ಲಿ ಮುನ್ನಡೆಯಬೇಕು. ಭಗತ್‌ಸಿಂಗ್ ಅವರ ಆದರ್ಶನಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ನುಡಿದರು.

ಎಬಿವಿಪಿ ಜಿಲ್ಲಾ ಪ್ರಮುಖರಾದ ಪ್ರೊ. ರವೀಂದ್ರ, ಕಾರ್ಯಕರ್ತರಾದ ರಾಧಾಕೃಷ್ಣ, ಅಪ್ಪು ಪಾಟೀಲ್, ವೀರೇಶ್, ವಿ. ನಾಗೇಂದ್ರ ಹಾಗೂ ೭೦ಕ್ಕೂ ಅಧಿಕ ವಿದ್ಯಾರ್ಥಿಗಳು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !