ತುಮಕೂರು: ಕಾಂಗ್ರೆಸ್ನಲ್ಲಿ ಸಾಕಷ್ಟು ಹೋಗೆಯಾಡುತ್ತಿದೆ ಎನ್ನುವುದಕ್ಕಿಂತ ಬೆಂಕಿ ಹೊತ್ತಿಕೊಂಡಿದೆ. ಅದು ಯಾವ ರೀತಿ ಎಂದು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ‘ಸೆಪ್ಟೆಂಬರ್ ಕ್ರಾಂತಿ’ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಆಡಳಿತ ವ್ಯವಸ್ಥೆ ಕುಸಿದಾಗ ಇಂತಹ ಮಾತು ಕೇಳಿ ಬರುವುದು ಸಹಜ. ಪಾಪದ ಕೊಡ ತುಂಬಿದಾಗ, ಸಾಮಾನ್ಯ ಜನರ ನೋವು ತಟ್ಟಿದಾಗ ಇಂತಹ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಬಿಜೆಪಿಯಲ್ಲಿ ಯಾವ ಕ್ರಾಂತಿಯೂ ಆಗುವುದಿಲ್ಲ. ಸಿದ್ಧಾಂತ, ತೀರ್ಮಾನದಂತೆ ನಡೆಯುತ್ತಿರುವ ಪಕ್ಷ ಬಿಜೆಪಿ ಎಂದು ತಿಳಿಸಿದರು.

ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಗ್ಗೆ ಪ್ರತಿಕ್ರಿಯಿಸಿ, ‘ನಾನು, ಮಾಧುಸ್ವಾಮಿ, ಇನ್ನೊಬ್ಬ ಸ್ವಾಮಿ, ಯಾರೂ ಪಕ್ಷಕ್ಕೆ ಅನಿವಾರ್ಯವಲ್ಲ. ಸಿದ್ದರಾಮಯ್ಯ ಅವರ ಸ್ನೇಹಿತರು, ಭೇಟಿಯಾಗಲು ಹೋಗಿದ್ದಾರೆ. ಇದನ್ನು ದೊಡ್ಡದಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.