ಶನಿವಾರ, ನವೆಂಬರ್ 28, 2020
25 °C

ಮಹಾಕಾವ್ಯಗಳೇ ಬದುಕಿಗೆ ದಾರಿದೀಪ: ಶಾಸಕ ಬಿ.ಸಿ. ನಾಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ಭಾರತೀಯರ ಆದರ್ಶ ಜೀವನಕ್ಕೆ ರಾಮಾಯಣ, ಮಹಾಭಾರದಂತಹ ಕಾವ್ಯಗಳೇ ಆಧಾರ. ಅಂತಹ ಕಾವ್ಯ ರಚಿಸಿದ ವಾಲ್ಮೀಕಿ ಮಹರ್ಷಿಯ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕ ಬಿ.ಸಿ. ನಾಗೇಶ್ ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ ಸಯೋಗದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಅವರು ಮಾತನಾಡಿದರು.

ಪುರಾತನ ಕಾಲದಿಂದಲೂ ರಾಮಯಣ, ಮಹಾಭಾರತ ಕಾವ್ಯ ಭಾರತೀಯ ಆದರ್ಶಯುತ ಬದುಕಿನ ದಾರಿ ದೀಪಗಳಾಗಿವೆ. ಅಲ್ಲಿನ ಪ್ರತಿಯೊಂದು ಸನ್ನಿವೇಶಗಳನ್ನು ಅರಿತು ನಿಜ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಜೀವನ ನಿರ್ವಹಣೆ ಸಾಧ್ಯ ಎಂದು ಸಲಹೆ ನೀಡಿದರು.

ಪ್ರತಿಯೊಬ್ಬರ ಮನೆಯಲ್ಲಿ ರಾಮನ ಆದರ್ಶಗಳನ್ನು ಮಕ್ಕಳಿಗೆ ಪಠಣೆ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ತಹಶೀಲ್ದಾರ್ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್, ಡಿವೈಎಸ್‍ಪಿ ಚಂದನ್ ಕುಮಾರ್, ಮುಖಂಡರಾದ ನಗರಸಭಾ ಸದಸ್ಯ ಮಹೇಶ್, ಜಯಸಿಂಹ, ದೊಡ್ಡಯ್ಯ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು