ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶೀಘ್ರ ಅಧುನಿಕ‌ ವಧಾಗಾರ ಉದ್ಘಾಟನೆಗೆ ಸೂಚನೆ: ಶಾಸಕ ಟಿ.ಬಿ.ಜಯಚಂದ್ರ

ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಶಾಸಕ ಜಯಚಂದ್ರ ತಾಕೀತು
Published : 24 ಸೆಪ್ಟೆಂಬರ್ 2024, 3:56 IST
Last Updated : 24 ಸೆಪ್ಟೆಂಬರ್ 2024, 3:56 IST
ಫಾಲೋ ಮಾಡಿ
Comments

ಶಿರಾ: ತಾಲ್ಲೂಕಿನ ಚೀಲನಹಳ್ಳಿ ಬಳಿ ನಿರ್ಮಾಣವಾಗಿರುವ ಕುರಿ ಮತ್ತು ಮೇಕೆ ಮಾಂಸ ಉತ್ಪಾದನೆ ಮತ್ತು ಆಧುನಿಕ ಸಂಸ್ಕರಣಾ ಕೇಂದ್ರ (ವಧಾಗಾರ)ವನ್ನು ಇನ್ನು 15 ದಿನಗಳಲ್ಲಿ ಉದ್ಘಾಟನೆ ಮಾಡುವಂತೆ ಶಾಸಕ ಟಿ.ಬಿ.ಜಯಚಂದ್ರ  ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪ್ರಗತಿ ಪರಿಶೀಲನಾ ನಡೆಸಿ ಮಾತನಾಡಿದರು. ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಕುರಿ ಮತ್ತು ಮೇಕೆ ಮಾಂಸ ಉತ್ಪಾದನೆ ಮತ್ತು ಆಧುನಿಕ ಸಂಸ್ಕರಣಾ ಕೇಂದ್ರವನ್ನು ನಿರ್ಮಾಣ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆಯಾಗಿಲ್ಲ. ಇದರಿಂರ ಕುರಿಗಾಹಿಗಳಿಗೆ ತೊಂದರೆಯಾಗುತ್ತಿದೆ. ತಕ್ಷಣ ಉದ್ಘಾಟನೆ ಮಾಡಲು ಸೂಚಿಸಿದರು.

ತಾಲ್ಲೂಕಿನ ಉಜ್ಜನಕುಂಟೆ ಸಮೀಪ 850 ಎಕರೆ ಪ್ರದೇಶದಲ್ಲಿ ಹೆರಿಟೇಜ್ ಹಬ್ ನಿರ್ಮಾಣ ಮಾಡಲಾಗುತ್ತಿದೆ. ತಾ.ಪಂ ಆಡಳಿತಾಧಿಕಾರಿಯಾಗಿರುವ ಅನುಪಮಾ ಅವರು ಅರಣ್ಯ ಇಲಾಖೆಗೆ ಸೇರಿದವರು ಆಗಿರುವುದರಿಂದ ಈ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಸಾಹಸ ತರಬೇತಿ ಕೇಂದ್ರ: ಜನರಲ್ ತಿಮ್ಮಯ್ಯ ಆಕಾಡೆಮಿಯಿಂದ ಜಾಗ ನೀಡಿದರೆ ಸಾಹಸ ಕ್ರೀಡೆಗಳ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಮೇಜರ್ ಜನರಲ್ ದೇವಯ್ಯ ಮನವಿ ಮಾಡಿದಾಗ, ಹೆರಿಟೇಜ್ ಹಬ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಜಾಗ ಸೂಕ್ತ ಎನಿಸಿದರೆ ಅಲ್ಲಿಯೇ ಜಾಗ ನೀಡುವುದಾಗಿ ಶಾಸಕರು ಹೇಳಿದರು.

ತಾಲ್ಲೂಕಿನ ಬರಗೂರು ಮತ್ತು ಬುಕ್ಕಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಾರ್ವಜನಿಕ ಆಸ್ಪತ್ರಗಳಾಗಿ ಮೇಲ್ಡರ್ಜೆಗೇರಿಸಿದರೆ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ಹೆಚ್ಚಿನ ಅಪಘಾತಗಳಾಗುವುದರಿಂದ ಕಳ್ಳಂಬೆಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟ್ರಾಮಾ ಸೆಂಟರ್ ಪ್ರಾರಂಭಿಸುವಂತೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಸಿದ್ದೇಶ್ವರ್, ಶಾಸಕರ ಗಮನಕ್ಕೆ ತಂದರು.

ಶಿರಾ ನಗರ ಆರೋಗ್ಯ ಕೇಂದ್ರದ ಬಳಿ 5ಎಕರೆ ಜಾಗ ಇದ್ದು ಅಲ್ಲಿ ಡೇ ಕೇರ್ ಸೆಂಟರ್ ಪ್ರಾರಂಭಿಸಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಾಥ್ ಹೇಳಿದರು.

ಬೆಳೆಗಳಿಗೆ ಔಷಧ ಮತ್ತು ನ್ಯಾನೋ ಯೂರಿಯಾ ಡ್ರೋಣ್ ಮೂಲಕ ಸಿಂಪಡಣೆ ಮಾಡಿಸಿ. ಉಚಿತವಾಗಿ ಡ್ರೋಣ್ ಕೊಡಿಸಲಾಗುವುದು. ರೈತರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಕೃಷಿ ಸಹಾಯಕ ನಿರ್ದೇಶಕ ನಾಗರಾಜು ಅವರಿಗೆ ಸೂಚಿಸಿದರು.

ತೋಟಗಾರಿಕೆ ಬೆಳೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ ಎಂದು ತೋಟಗಾರಿಗೆ ಸಹಾಯಕ ನಿರ್ದೇಶಕ ಸುಧಾಕರ್ ಅವರಿಗೆ ಸೂಚಿಸಿದರು.

ರೇಷ್ಮೆ ಇಲಾಖೆಗೆ ಸೇರಿದ 10 ಎಕರೆ ಜಾಗ ಭದ್ರಾ ಮೇಲ್ದಂಡೆ ಯೋಜನೆಗೆ ನೀಡಿ. ನಿಮಗೆ 30 ಎಕರೆ ಜಮೀನು ನೀಡಲಾಗುವುದು ಎಂದು ಹೇಳಿದರು.

ಮಧುಗಿರಿ ಉಪವಿಭಾಗಾಧಿಕಾರಿ ಗೋಟೊರು ಶಿವಪ್ಪ, ತಹಶೀಲ್ದಾರ್ ಸಚ್ಚಿದಾನಂದ ಕೂಚನೂರು, ತಾ.ಪಂ ಆಡಳಿತಾಧಿಕಾರಿ ಅನುಪಮಾ, ಇ.ಒ ಹರೀಶ್, ನಗರಸಭೆ ಅಧ್ಯಕ್ಷ ಜೀಷಾನ್ ಮಹಮೂದ್, ಪೌರಾಯುಕ್ತ ರುದ್ರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT