ಬುಧವಾರ, ಸೆಪ್ಟೆಂಬರ್ 22, 2021
24 °C

6ರಿಂದ ವೀರಶೈವ ಧರ್ಮ ಸಮ್ಮೇಳನ, ಬಸವೇಶ್ವರ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ನಗರದಲ್ಲಿ ಮೇ 6 ಮತ್ತು 7ರಂದು ರೇಣುಕಾಚಾರ್ಯ, ಬಸವಣ್ಣ ಮತ್ತು ಸಿದ್ದರಾಮೇಶ್ವರ ಜಂಟಿ ಜಯಂತ್ಯುತ್ಸವವನ್ನು ವೀರಶೈವ ಸಂಘಗಳ ಆಶ್ರಯದಲ್ಲಿ ಆಚರಿಸಲಾಗುವುದು ಎಂದು ನಗರ ವೀರಶೈವ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಇಲ್ಲಿ ತಿಳಿಸಿದರು.

ನಲವತ್ತು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಜಯಂತ್ಯುತ್ಸವ ಈ ಬಾರಿ ವಿಷೇಶತೆಗಳಿಂದ ಕೂಡಿರುತ್ತದೆ ಎಂದರು.

ಉತ್ಸವ ಸಮಿತಿ ಅದ್ಯಕ್ಷ ಕೋರಿ ಮಂಜುನಾಥ್ ಮಾತನಾಡಿ, ‘6 ರಂದು ಬೆಳಿಗ್ಗೆ 10.30ಕ್ಕೆ ಗವಿಮಠದ ಚನ್ನಬಸವರಾಜೇಂದ್ರ ಸ್ವಾಮೀಜಿ ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸುವರು. ಮೈತ್ರಿ ಬಳಗದಿಂದ ಮಕ್ಕಳಿಗೆ ಸ್ಥಳದಲ್ಲೆ ಚಿತ್ರ ಬಿಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಸಂಜೆ 5.45ಕ್ಕೆ ‘ವಚನ ವೈಭವ’ ನೃತ್ಯ ರೂಪಕ ಜರುಗಲಿದೆ. 6.30ಕ್ಕೆ ತಮ್ಮಡಿಹಳ್ಳಿಯ ಮಲ್ಲಿಕಾರ್ಜುನ ಸ್ವಾಮೀಜಿ ಧರ್ಮ ಸಮ್ಮೇಳನ ಉದ್ಘಾಟಿಸುವರು. ಡಿ.ಎನ್.ಯೋಗೀಶ್‌ ವಿಶೇಷ ಉಪನ್ಯಾಸ ನೀಡುವರು. ನಂತರ ಬಹುಮಾನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯುತ್ತದೆ ಎಂದು ತಿಳಿಸಿದರು.

7 ರಂದು ರೇಣುಕಾಚಾರ್ಯ, ಬಸವಣ್ಣ, ಸಿದ್ದರಾಮೇಶ್ವರರಿಗೆ ಕೋಡಿ ಬಸವೇಶ್ವರ ದೇವಸ್ಥಾನದಲ್ಲಿ ಮಹಾರುದ್ರಾಭಿಷೇಕ, ಮಧ್ಯಾಹ್ನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರಿಂದ ನಂದಿಧ್ವಜ ಪೂಜೆ ನಡೆಯಲಿದೆ. ನಂತರ ಎಸ್.ಐ.ಟಿ ಕಾಲೇಜು ಗಣಪತಿ ದೇವಸ್ಥಾನದಿಂದ ಕಲಾತಂಡದೊಂದಿಗೆ ಮೆರವಣಿಗೆ ಹೊರಟು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದೆ. ಕೋಡಿ ಬಸವೇಶ್ವರ ದೇವಸ್ಥಾನದ ಬಳಿ ಮೆರವಣಿಗೆ ಕೊನೆಗೊಳ್ಳುವುದು ಎಂದು ತಿಳಿಸಿದರು.

ಸಮಿತಿ ಉಪಾಧ್ಯಕ್ಷ ಎಸ್.ಬಿ.ಚಂದ್ರಮೌಳಿ ಹಾಗೂ ಕಾರ್ಯನಿರ್ವಾಹಕ ಸಮಿತಿ ಸದಸ್ಯರು, ನಿರ್ದೇಶಕರು ಗೋಷ್ಠಿಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು