ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30 ಸಾವಿರ ಮತಗಳಿಂದ ಗೆಲುವು ಖಚಿತ: ಜಮೀರ್

Last Updated 24 ಅಕ್ಟೋಬರ್ 2020, 2:19 IST
ಅಕ್ಷರ ಗಾತ್ರ

ಶಿರಾ: ಕ್ಷೇತ್ರದೆಲ್ಲೆಡೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ಪರ ಅಲೆಯಿದ್ದು ಸುಮಾರು 30 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಶಾಸಕ ಬಿ.ಝೆಡ್. ಜಮೀರ್ ಅಹಮದ್ ಖಾನ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ತಾಲ್ಲೂಕಿಗೆ ಹೇಮಾವತಿ ನೀರು ಬರಲು ಜಯಚಂದ್ರ ಅವರು ಕಾರಣ. 20 ಸಾವಿರ ಮನೆ ನಿರ್ಮಾಣ ಮಾಡುವ ಮೂಲಕ ‌ಬಡವರಿಗೆ ಸೂರು ಒದಗಿಸಿದ್ದಾರೆ. ಜಿಲ್ಲಾಮಟ್ಟದ ಎಲ್ಲ ಸೌಲಭ್ಯ ದೊರೆಯುವಂತೆ ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ. ಇದನ್ನು ಗಮನಿಸಿ ಈ ಬಾರಿ ಮತದಾರರು ಜಯಚಂದ್ರ ಅವರನ್ನು ಗೆಲ್ಲಿಸಲಿದ್ದಾರೆ ಎಂದರು.

ಇಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಧ್ಯೆ ಸ್ಪರ್ಧೆ ಇದೆ. ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿ ಪಡಬೇಕಾದ ಸ್ಥಿತಿ ಇದೆ. ಕೆಆರ್ ಪೇಟೆ ಮಾದರಿಯಲ್ಲಿ ಚುನಾವಣೆ ಮಾಡುವುದಾಗಿ ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ. ಆದರೆ ಕೆಆರ್‌ ಪೇಟೆಯಲ್ಲಿ ಬಿಜೆಪಿ ಮುಖನೋಡಿ ಯಾರು ಮತ ಹಾಕಿಲ್ಲ. ನಾರಾಯಣಗೌಡ ಅವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ನೀಡಿದ್ದಾರೆ. ಇಲ್ಲಿ ಅಂತಹ ಪರಿಸ್ಥಿತಿ ಇಲ್ಲ. ವಿಜಯೇಂದ್ರ ಅವರ ಆಟ ನಡೆಯುವುದಿಲ್ಲ ಎಂದರು.

ಮುಖಂಡರಾದ ಶಕೀಲ್ ನವಾಜ್, ಜಿ.ಎ.ಬಾವ, ಬಿ.ಕೆ.ಅಲ್ತಾಪ್ ಖಾನ್, ವಿನಾಯಕ್, ಹಬೀಬ್ ಖಾನ್, ಚಾಂದ್ ಪಾಷ, ಜೀಷಾನ್ ಅಹಮದ್, ಅಬ್ದುಲ್ ಖಾನ್, ಅಹ್ಮದಿ, ನೂರುದ್ದೀನ್, ರಾಮು ಗೋಷ್ಠಿಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT