ಶುಕ್ರವಾರ, ಮೇ 20, 2022
19 °C

ಸಂಘಟಿತ ಹೋರಾಟಕ್ಕೆ ಗೆಲುವು: ರಾಜೇಂದ್ರ,

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊರಟಗೆರೆ: ಆರ್. ರಾಜೇಂದ್ರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರುವಿಜಯೋತ್ಸವ ಆಚರಿಸಿದರು.

ಇಲ್ಲಿನ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಶಾಸಕ ಡಾ.ಜಿ. ಪರಮೇಶ್ವರ, ಕೆ.ಎನ್. ರಾಜಣ್ಣ ಹಾಗೂ ಕಾಂಗ್ರೆಸ್ ಮುಖಂಡರಿಗೆ ಜೈಕಾರ ಕೂಗುತ್ತಾ ಸ್ಥಳಕ್ಕೆ ಬಂದ ರಾಜೇಂದ್ರ ಅವರಿಗೆ ಹೂಮಾಲೆ ಹಾಕಿ ಹೊತ್ತು ಕುಣಿದು ಸಂಭ್ರಮಿಸಿದರು. ಬಳಿಕ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾತನಾಡಿದ ವಿಧಾನ ಪರಿಷತ್ ನೂತನ ಸದಸ್ಯ ರಾಜೇಂದ್ರ, ಈ ಚುನಾವಣಾ ಗೆಲುವು ಕಾಂಗ್ರೆಸ್ ಪಕ್ಷದ ನಾಯಕರ, ಮುಖಂಡರ, ಕಾರ್ಯಕರ್ತರ ಗೆಲುವಾಗಿದೆ ಎಂದರು.

ಪರಮೇಶ್ವರ ನೇತೃತ್ವದಲ್ಲಿ ನಡೆದ ಈ ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಒಗ್ಗಟ್ಟು ಗೆಲುವಿಗೆ ಕಾರಣವಾಗಿದೆ. ಇಂದು ನಾವು ಸಂಭ್ರಮ ಪಡುವುದಲ್ಲ. ಮುಂಬರುವ 2023 ರ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಸದಸ್ಯರನ್ನು ಆಯ್ಕೆ ಮಾಡುವ ಮೂಲಕ ಜಯಭೇರಿ ಬಾರಿಸಬೇಕು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶ್ರಮವಹಿಸಬೇಕು ಎಂದರು.

ಇದಕ್ಕೆ ಮುನ್ನುಡಿಯಂತೆ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚು ಸಂಖ್ಯೆಯಲ್ಲಿ ಗೆಲ್ಲಿಸಬೇಕಾದ ಜವಾಬ್ದಾರಿ ಇದೆ. ಕ್ಷೇತ್ರದ ಶಾಸಕರು ಪಕ್ಷದ ನಾಯಕರಾದ ಪರಮೇಶ್ವರ ನನ್ನ ಗೆಲುವಿಗೆ ಸಾಕಷ್ಟು ಶ್ರಮವಹಿಸಿದ್ದಾರೆ. ಈಗಾಗಲೇ ಅವರನ್ನು ದೂರವಾಣಿ ಮುಖಾಂತರ ಸಂಪರ್ಕ ಮಾಡಿ ಗೆಲುವಿನ ಸಂಭ್ರಮ ಹಂಚಿಕೊಂಡಿದ್ದೇನೆ ಎಂದು
ತಿಳಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ಕೆ.ಆರ್. ಓಬಳರಾಜು, ಎ.ಡಿ. ಬಲರಾಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್, ಯುವ ಅಧ್ಯಕ್ಷ ವಿನಯ್, ಮುಖಂಡರಾದ ಎಲ್. ರಾಜಣ್ಣ, ಮಧು, ರಘು, ವೆಂಕಟಪ್ಪ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು