ಹುಳಿಯಾರು: ತೆಂಗು ಬೆಳೆಗಾರರ ಸಂಕಷ್ಟ ಪರಿಹಾರಕ್ಕೆ ಒತ್ತಾಯಿಸಿ ಇದೇ 26ರಂದು ಅರಸೀಕೆರೆಯಿಂದ ವಿಧಾನಸೌಧವರೆಗೆ ರಾಜ್ಯ ರೈತಸಂಘ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ರೈತ ಸಂಘ ಘಟಕದ ವತಿಯಿಂದ 100ಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ ಎಂದು ರೈತ ಸಂಘದ ಕೆಂಕೆರೆ ಸತೀಶ್ ತಿಳಿಸಿದ್ದಾರೆ.
ಕೊಬ್ಬರಿ ಬೆಲೆ ದಿನೇ ದಿನೇ ಕುಸಿಯುತ್ತಿದೆ. ತೆಂಗು ಬೆಳೆಗಾರರ ಕಷ್ಟ ಹೇಳತಿರದಾಗಿದೆ. ಸುಮಾರು ₹15ಸಾವಿರಕ್ಕೂ ಹೆಚ್ಚು ಇದ್ದ ಬೆಲೆ ಪ್ರಸ್ತುತ ₹8ಸಾವಿರಕ್ಕೆ ಕುಸಿದಿದೆ. ಇದೇ ಪರಿಸ್ಥಿತಿ ಮುಂದುವರಿದರೆ ತೆಂಗು ಬೆಳೆಗಾರರು ಅತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.