ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲಾತಿ ಹೆಚ್ಚಿಸಿದ ವಿದ್ಯಾಗಮ

ಮಧುಗಿರಿ ಶೈಕ್ಷಣಿಕ ಜಿಲ್ಲೆ: ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು
Last Updated 15 ಸೆಪ್ಟೆಂಬರ್ 2020, 4:10 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು ಹೆಚ್ಚಿದ್ದು, ಮಕ್ಕಳನ್ನು ಸದ್ದಿಲ್ಲದೇ ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ.

ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿದೆ.ಜಿಲ್ಲೆಯಲ್ಲಿ 1,356 ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ 90 ಪ್ರೌಢಶಾಲೆಗಳಿವೆ. ಈಗಾಗಲೇ, 3,412 ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ ಸೇರಿದ್ದಾರೆ. 2,832 ವಿದ್ಯಾರ್ಥಿಗಳು ಪ್ರಾಥಮಿಕ ಶಾಲೆಗೆ ಹಾಗೂ 580 ವಿದ್ಯಾರ್ಥಿಗಳು ಪ್ರೌಢಶಾಲೆಗೆ ದಾಖಲಾಗಿದ್ದಾರೆ.

ವಿದ್ಯಾಗಮ ಯೋಜನೆಯೂ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸರ್ಕಾರಿ ಶಾಲೆಗಳತ್ತ ಒಲವು ಹೆಚ್ಚಿಸಿದೆ. ಲಾಕ್‌ಡೌನ್‌ನಿಂದಾಗಿ ಕೆಲ ತಿಂಗಳು ತರಗತಿ ನಡೆದಿರಲಿಲ್ಲ. ನಂತರ ಆರಂಭವಾದ ವಿದ್ಯಾಗಮ ಮಕ್ಕಳಿಗೆ ಕಲಿಕೆಯ ಹೊಸ ಆಸಕ್ತಿ ಬಿತ್ತಿದೆ. ಗ್ರಾಮಗಳ ಸಮುದಾಯ ಭವನ, ವಠಾರ, ಅರಳಿಕಟ್ಟೆ ಹಾಗೂ ದೇವಸ್ಥಾನಗಳಲ್ಲಿ ಪಾಠ ನಡೆಯುತ್ತಿರುವ ಪರಿಪೋಷಕರನ್ನು ಆಕರ್ಷಿಸಿದೆ ಎನ್ನುತ್ತಾರೆ ಶಿಕ್ಷಕರು.

ಪೋಷಕರ ಒಲವು

ಲಾಕ್‌ಡೌನ್‌ನಿಂದಾಗಿ ವಲಸೆ ಬಂದ ಸಾಕಷ್ಟು ಕುಟುಂಬಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ವಂತಿಗೆ ಭರಿಸುವಷ್ಟು ಚೈತನ್ಯವಿಲ್ಲ. ಹಾಗಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆ ಗಳಿಗೆ ಸೇರಿಸುತ್ತಿದ್ದಾರೆ. ವಿದ್ಯಾಗಮ ಯೋಜನೆ ಸಾಕಷ್ಟು ಯಶಸ್ವಿಯಾಗಿದ್ದು, ನಿರಂತರವಾಗಿ ತರಗತಿಗಳು ನಡೆಯುತ್ತಿವೆ. ಎನ್ನುತ್ತಾರೆ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ರೇವಣ್ಣಸಿದ್ದಪ್ಪ.

ಈ ವರ್ಷ 200 ದಾಖಲಾತಿ

‘ಪುರವರ ಸರ್ಕಾರಿ ಪ್ರಾಥಮಿಕ ಶಾಲೆಗೆ ಕಳೆದ ಶೈಕ್ಷಣಿಕ ವರ್ಷದಲ್ಲಿ 150 ವಿದ್ಯಾರ್ಥಿಳು ದಾಖಲಾಗಿದ್ದರು. ಈ ವರ್ಷ ದಾಖಲಾತಿ ಸಂಖ್ಯೆ 200 ದಾಟಿದೆ. ವಿದ್ಯಾಗಮ ಯೋಜನೆಯಿಂದಾಗಿ ಸರ್ಕಾರಿ ಶಾಲೆ ಶಿಕ್ಷಕರ ಬದ್ಧತೆ ಸಾರ್ವಜನಿಕರಿಗೆ ಅರಿವಾಗಿದೆ. ಕೀಳರಿಮೆ ದೂರವಾಗಿದೆ’ ಎನ್ನುತ್ತಾರೆ ತಾಲ್ಲೂಕು ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟರವಣಪ್ಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT