ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾಜ್ಯೋತಿ ಸಂಪರ್ಕ ಕಡಿತ: ಅಸಮಾಧಾನ

Last Updated 23 ಡಿಸೆಂಬರ್ 2020, 3:24 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ಪುರವರ ಹೋಬಳಿಯ ಹಂದ್ರಾಳು ಗ್ರಾಮದಲ್ಲಿ ವಿದ್ಯಾಜ್ಯೋತಿ ಯೋಜನೆಯಡಿ ಹಲವು ವಿದ್ಯಾರ್ಥಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಬ್ಯಾಲ್ಯ ಬೆಸ್ಕಾಂ ಇಲಾಖೆ ಈಗ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದಕ್ಕೆ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ.

ಕೊರೊನಾ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳು ಕಲಿಕೆಯಿಂದ ದೂರ ಉಳಿಯಬಾರದೆಂದು ಸರ್ಕಾರ ಚಂದನ ವಾಹಿನಿಯಲ್ಲಿ ತರಗತಿಗಳನ್ನು ಪ್ರಸಾರ ಮಾಡುತ್ತಿದೆ. ಮಕ್ಕಳು ಮನೆಯಲ್ಲೇ ಇದ್ದು ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯತೆ ಎದುರಾಗಿರುವ ಸಂದರ್ಭದಲ್ಲಿ ನಾಲ್ಕೈದು ದಿನಗಳಿಂದ ವಿದ್ಯಾಜ್ಯೋತಿ ಕಡಿತ ಗೊಳಿಸಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವಿದ್ಯಾಜ್ಯೋತಿ ಯೋಜನೆಯಡಿಯಲ್ಲಿ ಆಯ್ಕೆಯಾಗಿದ್ದತಾಲ್ಲೂಕಿನ ಎಲ್ಲ ವಿದ್ಯಾರ್ಥಿಗಳ ಮನೆಗಳಿಗೆ ಉಚಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಹಂದ್ರಾಳು ನಾಗಭೂಷಣ್ ಒತ್ತಾಯಿಸಿದ್ದಾರೆ.

2017ರಲ್ಲಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಂದಿನ ಶಾಸಕರು ಇಲಾಖೆಗೆ ಸೂಚಿಸಿದ್ದರು.ಆನಂತರ ಮೀಟರ್ ಹಾಕಿಸಿಕೊಳ್ಳುವಂತೆ ಹೇಳಲಾಗಿತ್ತು. ಆದರೆ ಹಲವು ವರ್ಷ ಕಳೆದರೂ ಯಾರೊಬ್ಬರೂ ಮೀಟರ್ ಹಾಕಿಸಿಕೊಳ್ಳದ ಕಾರಣ ಈಗ ಇಲಾಖೆಯ ಸೂಚನೆ ಮೇರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಈಗ ಯಾರು ಅನುಮತಿ ಪಡೆಯುತ್ತಾರೊ ಅವರಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದುಕೊಡಿಗೇನಹಳ್ಳಿಎಇಇ ಮಲ್ಲಿಕಾರ್ಜುನಯ್ಯ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT