ತುಮಕೂರು: ಕಿತ್ತೂರು ಉತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯು ಮಂಗಳವಾರ ನಗರ ತಲುಪಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜ್ಯೋತಿ ಯಾತ್ರೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ, ‘ಕಿತ್ತೂರು ರಾಣಿ ಚೆನ್ನಮ್ಮ ಅವರ ತ್ಯಾಗ, ಶೌರ್ಯ ಮತ್ತು ದೇಶ ಭಕ್ತಿಯು ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಬೇಕು. ಬ್ರಿಟೀಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ. ಜಿಲ್ಲೆಯ ವಿವಿಧೆಡೆ ಯಾತ್ರೆ ಸಂಚರಿಸಲಿದೆ’ ಎಂದರು.

ಅ. 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾತ್ರೆಗೆ ಚಾಲನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಅ. 23ರಿಂದ 25ರ ವರೆಗೆ ಕಿತ್ತೂರು ಉತ್ಸವ ಏರ್ಪಡಿಸಲಾಗಿದೆ. ರಾಜ್ಯದಾದ್ಯಂತ ಸಂಚರಿಸುವ ಯಾತ್ರೆಯು ಚಿಕ್ಕಮಗಳೂರು ಮುಖಾಂತರ ಜಿಲ್ಲೆ ಪ್ರವೇಶಿಸಿದೆ. ದಾಬಸ್ಪೇಟೆ ಮಾರ್ಗವಾಗಿ ಬೆಂಗಳೂರು ಉತ್ತರ ಜಿಲ್ಲೆಗೆ ತೆರಳಿದೆ ಎಂದು ತಿಳಿಸಿದರು.

ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಕಾರ್ಯದರ್ಶಿ ಕೆ.ಸಣ್ಣಹೊನ್ನಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹರಾಜು ಮೊದಲಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.