ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಲ್ಲಿಸಿದ ಬಸ್‌: ಹೆದ್ದಾರಿಯಲ್ಲಿ ಬಸ್‌ ತಡೆದು ದೊಡ್ಡಗುಣಿ ಗ್ರಾಮಸ್ಥರ ಪ್ರತಿಭಟನೆ

Published 13 ಮೇ 2024, 5:02 IST
Last Updated 13 ಮೇ 2024, 5:02 IST
ಅಕ್ಷರ ಗಾತ್ರ

ಗುಬ್ಬಿ: ನಿಟ್ಟೂರು ಹೋಬಳಿ ದೊಡ್ಡಗುಣಿ ಗ್ರಾಮದಲ್ಲಿ ನಿಲುಗಡೆ ಇರುವ ಸರ್ಕಾರಿ ಬಸ್‌ಗಳನ್ನೂ ಗ್ರಾಮದಲ್ಲಿ ನಿಲ್ಲಿಸದೆ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಪ್ರಯಾಣಿಕರನ್ನು ಇಳಿಸಿ ಹೋಗುತ್ತಿದ್ದಾರೆ ಎಂದು ಆರೋಪಿಸಿ ದೊಡ್ಡಗುಣಿ ಗ್ರಾಮಸ್ಥರು ಶನಿವಾರ ರಾತ್ರಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಈ ಮೊದಲು ಗ್ರಾಮದಲ್ಲಿ ಬಸ್‌ಗಳು ವ್ಯವಸ್ಥಿತವಾಗಿ ನಿಲ್ಲುತ್ತಿದ್ದವು. ಆದರೆ ಮೇಲ್ಸೇತುವೆ ನಿರ್ಮಾಣದ ನಂತರ ಬಸ್‌ ಚಾಲಕರು ಸರ್ವಿಸ್ ರಸ್ತೆಯಲ್ಲಿ ಬರುವ ಬದಲಾಗಿ ಮೇಲ್ಸೇತುವೆ ಮೇಲೆ ಬಂದು ಗ್ರಾಮದ ಹೊರಭಾಗದಲ್ಲಿ ಪ್ರಯಾಣಿಕರನ್ನು ಇಳಿಸಿ ಹೋಗುತ್ತಿರುವುದರಿಂದ ತೊಂದರೆಯಾಗುತ್ತಿದೆ ಎಂದು ಪ್ರತಿಭಟನೆನಿರತರು ದೂರಿದರು.

ಅವ್ಯವಸ್ಥೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಮೊದಲಿನಂತೆ ಸರ್ವಿಸ್ ರಸ್ತೆಯಲ್ಲಿ ಬಸ್‌ಗಳು ಬಂದು ಗ್ರಾಮದಲ್ಲಿ ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT