ಮಧುಗಿರಿ: ಮೂರು ದಿನದ ದಿನದ ಹಿಂದೆ ಗ್ರಾಮದ ಊಟ ಮಾಡಿದ ನಂತರ ವಾಂತಿಭೇದಿಯಿಂದ ಅಸ್ವಸ್ಥಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಪುರವರ ಹೋಬಳಿಯ ಮುದ್ದೇನಹಳ್ಳಿ ಗ್ರಾಮದ 70 ವರ್ಷದ ವ್ಯಕ್ತಿಯೊಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಮುದ್ದೇನಹಳ್ಳಿ ಗ್ರಾಮದ ತಿಪ್ಪೇರಾಯಣ್ಣ(70) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮತ್ತಿಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಗಸ್ಟ್ 26ರಂದು ಗ್ರಾಮದ ಎರಡು ಮನೆಗಳಲ್ಲಿ ಊಟ ಮಾಡಿ ವಾಂತಿಭೇದಿಯಿಂದ ಅಸ್ವಸ್ಥಗೊಂಡ ಏಳು ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಗ್ರಾಮಕ್ಕೆ ತಾಲ್ಲೂಕು ವೈದ್ಯಾಧಿಕಾರಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಲ್ಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದ 31 ಜನರ ಪೈಕಿ ಮೂವರು ಮೃತಪಟ್ಟ ಘಟನೆ ನಡೆದ ಎರಡು, ಮೂರು ದಿನಗಳಲ್ಲಿಯೇ ತಾಲ್ಲೂಕಿನಲ್ಲಿ ಮತ್ತೊಂದು ಘಟನೆ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.