ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ಜಾಗೃತಿ: ಹಲವು ಸ್ಪರ್ಧೆ

Published 4 ಏಪ್ರಿಲ್ 2024, 7:00 IST
Last Updated 4 ಏಪ್ರಿಲ್ 2024, 7:00 IST
ಅಕ್ಷರ ಗಾತ್ರ

ತುಮಕೂರು: ಕಬಡ್ಡಿ, ಕ್ರಿಕೆಟ್‌, ವಾಲಿಬಾಲ್‌, ಮಹಿಳೆಯರಿಗೆ ಮ್ಯೂಸಿಕಲ್ ಚೇರ್‌, ರಂಗೋಲಿ ಇತರೆ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿಯಿಂದ ‘ನಮ್ಮ ನಡೆ ಮತಗಟ್ಟೆ ಕಡೆ’ ಎಂಬ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಪ್ರಯುಕ್ತ ಬುಧವಾರ ನಗರದ ಅಳಶೆಟ್ಟಿಕೆರೆ ಪಾಳ್ಯ ಸರ್ಕಾರಿ ಶಾಲೆಯಲ್ಲಿ ಯುವ ಮತದಾರರಿಗೆ, ಮಹಿಳೆಯರಿಗೆ ವಿವಿಧ ಕ್ರೀಡೆ, ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

‘ಏ. 6ರಂದು ಮಹಿಳೆಯರಿಗೆ ದ್ವಿಚಕ್ರ ವಾಹನ ರ್‍ಯಾಲಿ, ಪಾಲಿಕೆಯ ಕಸ ಸಂಗ್ರಹಣೆ ವಾಹನಗಳ ಜಾಥಾ ಏರ್ಪಡಿಸಲಾಗಿದೆ. ಏ.17 ಶ್ರೀರಾಮ ನವಮಿಯ ದಿನ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಕೋಲಾಟ, ಬೀದಿನಾಟಕ, ಕೋತಿತೋಪು ರಸ್ತೆಯ ಫುಡ್‍ ಸ್ಟ್ರೀಟ್‍ನಲ್ಲಿ ಮತದಾನ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ತಿಳಿಸಿದರು.

ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ‘ಏ. 21ರಂದು ನಾಗರಿಕರನ್ನು ಮತಗಟ್ಟೆಗೆ ಕರೆದು ಅವರಿಗೆ ಚುನಾವಣೆ, ಮತದಾನದ ಮಹತ್ವ ಕುರಿತು ಮನವರಿಕೆ ಮಾಡಿಕೊಡಲಾಗುತ್ತದೆ. 25ರಂದು ನಗರದ ಎಲ್ಲಾ 235 ಮತಗಟ್ಟೆಗಳಲ್ಲಿ ನನ್ನ ಮತಗಟ್ಟೆ ಸುಂದರ ಮತಗಟ್ಟೆ ಎಂಬ ಕಾರ್ಯಕ್ರಮದಡಿ ಮತಗಟ್ಟೆ ಸ್ವಚ್ಛಗೊಳಿಸಿ, ಆವರಣದಲ್ಲಿ ರಂಗೋಲಿ ಹಾಕಿ, ತೋರಣ ಕಟ್ಟಿ ಅಲಂಕರಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಪಾಲಿಕೆ ಉಪ ಆಯುಕ್ತರಾದ ಸೋಮಶೇಖರ್‌, ಗಿರೀಶ್, ಪರಿಸರ ಎಂಜಿನಿಯರ್‌ ಪೂರ್ಣಿಮಾ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT