ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಗಾಳಿಪಟ ಹಾರಿಸಿ ಮತ ಜಾಗೃತಿ

Published 30 ಮಾರ್ಚ್ 2024, 14:26 IST
Last Updated 30 ಮಾರ್ಚ್ 2024, 14:26 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವರ ಬೆಟ್ಟದ ಮೇಲೆ ಶನಿವಾರ ‘ಚುನಾವಣಾ ಪರ್ವ ದೇಶದ ಗರ್ವ’ ಎಂಬ ಘೋಷವಾಕ್ಯ ಇರುವ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಸ್ವೀಪ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಬೆಟ್ಟದಲ್ಲಿ ಚಾರಣ ನಡೆಸಿದರು. ಬೆಟ್ಟದ ತುದಿಯಲ್ಲಿ ನಿಂತು ಕಡ್ಡಾಯ ಮತದಾನ ಮಾಡುವಂತೆ ಘೋಷಣೆ ಕೂಗಿದರು. ಗಾಳಿಪಟ ಹಾರಿಸಿ ಖುಷಿಪಟ್ಟರು.

ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹರ್ಷಕುಮಾರ್‌, ‘ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರತಿಯೊಬ್ಬರೂ ಮತದಾನ ಮಾಡಿ ನಮಗೆ ಬೇಕಾದ ಸರ್ಕಾರವನ್ನು ನಾವೇ ಆಯ್ಕೆ ಮಾಡಿಕೊಂಡು ಸ್ವಚ್ಛಂದವಾಗಿ ಸಮಾಜದಲ್ಲಿ ಬದುಕಬಹುದು ಎನ್ನುವುದನ್ನು ಜನರಿಗೆ ತಿಳಿಸಲು ಗಾಳಿಪಟ ಹಾರಿಸಲಾಗಿದೆ’ ಎಂದರು.

ಕೃಷಿ ಉಪನಿರ್ದೇಶಕ ಅಶೋಕ್‌, ತಹಶೀಲ್ದಾರ್ ಸಿದ್ದೇಶ್, ತಾಲ್ಲೂಕು ಯೋಜನಾಧಿಕಾರಿ ಲೋಕೇಶ್‌ ಕುಮಾರ್, ಸಹಾಯಕ ನಿರ್ದೇಶಕ ಮಂಜುನಾಥ್‌ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT