ಭಾನುವಾರ, ಏಪ್ರಿಲ್ 11, 2021
33 °C

ಮತದಾರರ ದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕನಾಯಕನಹಳ್ಳಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಜವಾಬ್ದಾರಿ ಅರಿತು ಮತ ಚಲಾಯಿಸಿ, ಯೋಗ್ಯ ಅಭ್ಯರ್ಥಿ ಆಯ್ಕೆಯಿಂದ ಸಂವಿಧಾನದ ಆಶಯ ಈಡೇರಿಸಬಹುದು ಎಂದು ಪ್ರಾಂಶುಪಾಲ ಎಚ್.ಎಸ್.ಶಿವಯೋಗಿ ಹೇಳಿದರು.

ಪಟ್ಟಣದ ನವೋದಯ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ತಾಲ್ಲೂಕು ಸಾಕ್ಷರತಾ ಸಮಿತಿಯ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು.

ವಿಭಾಗದ ಮುಖ್ಯಸ್ಥ ಪ್ರೊ.ಸದಾನಂದ ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮತದಾನ ಮತ್ತು ಅದರ ಮಹತ್ವ ಕುರಿತು ಉಪನ್ಯಾಸ ನೀಡಿದರು.

ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮತದಾನ ಕುರಿತು ಉಪನ್ಯಾಸ, ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಎಚ್.ಎಸ್. ಪ್ರಕಾಶ, ಕನ್ನಡ ವಿಭಾಗದ ಡಾ.ಸಿ.ಕೆ.ಶೇಖರ್ ಉಪಸ್ಥಿತರಿದ್ದರು.

ಸಾರ್ವಜನಿಕರಿಗೆ ಮತದಾನ ಅರಿವು ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು