ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮತದಾನ ಜಾಗೃತಿ ಜಾಥಾ | ಗಿಡ ನೆಟ್ಟು, ಮತದಾನ ಮಾಡಿ: ಬಿ.ವಿ.ಅಶ್ವಿಜ

Published 30 ಮಾರ್ಚ್ 2024, 4:38 IST
Last Updated 30 ಮಾರ್ಚ್ 2024, 4:38 IST
ಅಕ್ಷರ ಗಾತ್ರ

ತುಮಕೂರು: ಲೈಂಗಿಕ ಅಲ್ಪಸಂಖ್ಯಾತರು, ಅಂಗವಿಕಲರ ಜತೆಗೆ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇಡೀ ದೇಶಕ್ಕೆ ಮಾದರಿ ಎಂದು ಸಾಮಾಜಿಕ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅಭಿಪ್ರಾಯಪಟ್ಟರು.

ನಗರದಲ್ಲಿ ಶುಕ್ರವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್‌ ಸಮಿತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದುವರೆಗೆ ಯಾರೂ ತಲುಪಲಾಗದ ಅಂಗವಿಕಲರು, ಲೈಂಗಿಕ ಅಲ್ಪಸಂಖ್ಯಾತರು ಸೇರಿದಂತೆ ಧ್ವನಿಯಿಲ್ಲದ ಜನರು ಜಾಥಾದಲ್ಲಿ ಭಾಗವಹಿಸುವಂತೆ ಮಾಡಿದ್ದಾರೆ. ಗ್ರಾಮೀಣಕ್ಕಿಂತ ನಗರದಲ್ಲಿ ಕಡಿಮೆ ಮತದಾನ ಆಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ವಿದ್ಯಾವಂತರು ಮತದಾನದಿಂದ ದೂರ ಉಳಿಯಬಾರದು ಎಂದರು.

ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ‘ನಗರದಲ್ಲಿ ಮೊದಲ ಬಾರಿ ಮತದಾನ ಮಾಡುತ್ತಿರುವ ಸುಮಾರು 4,800ಕ್ಕೂ ಹೆಚ್ಚು ಮತದಾರರನ್ನು ಭೇಟಿಯಾಗಿ ಒಂದೊಂದು ಗಿಡ ನೀಡಲಾಗುತ್ತದೆ. ತಾವು ಮತದಾನ ಮಾಡುವ ಕೇಂದ್ರದಲ್ಲಿ ಗಿಡ ನೆಟ್ಟು ಮತದಾನ ಮಾಡಿದ ನೆನಪಿನ ಜತೆಗೆ ಪರಿಸರ ಕಾಳಜಿ ಮರೆಯಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.

ಕಾಂತರಾಜು ಕೌತುಮಾರನಹಳ್ಳಿ ಅವರ ನೇತೃತ್ವದ ‘ದವನ ಭೂಮಿಕೆ’ ಬಳಗದ ಕಲಾವಿದರು ಮತದಾನ ಕುರಿತು ಕಿರು ನಾಟಕ ಪ್ರದರ್ಶಿಸಿದರು. ಬಿಜಿಎಸ್‌ ವೃತ್ತದ ಬಳಿ ಆರಂಭವಾದ ಜಾಥಾವು ಅಶೋಕ ರಸ್ತೆ, ಸ್ವಾತಂತ್ರ್ಯ ಚೌಕ, ಜಿಲ್ಲಾಧಿಕಾರಿ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್‌ ರಸ್ತೆ, ಗುಂಚಿ ಚೌಕ, ಎಂ.ಜಿ.ರಸ್ತೆ ಮುಖಾಂತರ ಬಾಲ ಭವನ ತಲುಪಿತು. ಎನ್‌ಸಿಸಿ ವಿದ್ಯಾರ್ಥಿಗಳು, ಅಂಗವಿಕಲರು ಭಾಗವಹಿಸಿದ್ದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿ.ಮರಿಯಪ್ಪ, ಉಪ ಆಯುಕ್ತರಾದ ಸೋಮಶೇಖರ್, ಗಿರೀಶ್, ನಾಗಭೂಷಣ್, ಕೌನ್ಸಿಲ್‌ ಕಾರ್ಯದರ್ಶಿ ನಜ್ಮಾ, ಪರಿಸರ ಎಂಜಿನಿಯರ್ ಪೂರ್ಣಿಮಾ, ಕಾರ್ಯನಿರ್ವಾಹಕ ಎಂಜಿನಿಯರ್‌ ವಿನಯ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ಎಸ್‌.ಶ್ರೀಧರ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT