ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿ ಕಾರ್ಯಕ್ರಮ

ಎನ್‌ಎಸ್‌ಎಸ್‌ನಿಂದ ವಿಶೇಷ ಉಪನ್ಯಾಸ ಆಯೋಜನೆ
Last Updated 26 ಜನವರಿ 2021, 1:27 IST
ಅಕ್ಷರ ಗಾತ್ರ

ಚಿಕ್ಕನಾಯಕನಹಳ್ಳಿ: ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ ಎಂದು ಪಟ್ಟಣದ ನವೋದಯ ಪ್ರಥಮದರ್ಜೆ ಕಾಲೇಜಿನ ಐಕ್ಯುಎಸಿ ಸಂಯೋಜಕ ಪ್ರೊ.ಎಚ್. ಎಸ್. ಪ್ರಕಾಶ ಹೇಳಿದರು.

ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಎನ್ಎಸ್ಎಸ್ ವತಿಯಿಂದ ಹಮ್ಮಿಕೊಂಡಿದ್ದ ಯುವಕರಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಜಗತ್ತಿನಲ್ಲಿಯೇ ಅತಿದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ವಿದ್ಯಾರ್ಥಿಯು ಹಳ್ಳಿಗಳಲ್ಲಿ ಮತದಾನದ ಬಗ್ಗೆ ತಿಳಿಹೇಳಬೇಕು. ಎಲ್ಲರೂ ಸಾಮಾಜಿಕವಾಗಿ ತಮ್ಮ ಕರ್ತವ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸದಾನಂದ ಸ್ವಾಮಿ ಪ್ರತಿಜ್ಞಾವಿಧಿ ಬೋಧಿಸಿ ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಜವಾಬ್ದಾರಿ ಅರಿತು ಕಾರ್ಯ ಮಾಡಬೇಕು ಎಂದರು.

ಮತದಾರ ಜಾಗೃತಿ ಆಗದಿದ್ದರೆ ದೇಶದ ಭವಿಷ್ಯ ಸರಿಯಾದ ದಿಕ್ಕಿನಲ್ಲಿ ಸಾಗುವುದಿಲ್ಲ ಎಂದು ಹೇಳಿದರು.

ಪ್ರಾಂಶುಪಾಲಪ್ರೊ.ಎಚ್.ಎಸ್. ಶಿವಯೋಗಿ ಅಧ್ಯಕ್ಷತೆವಹಿಸಿದ್ದರು. ವೇದಿಕೆಯಲ್ಲಿ ಎನ್ಎಸ್ಎಸ್ ಅಧಿಕಾರಿ ರವಿಕುಮಾರ್, ಉಪನ್ಯಾಸಕರಾದ ಡಾ.ಶೇಖರ್, ಸತೀಶ್ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT