ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿ ಕಾಲ್ನಡಿಗೆ ಜಾಥಾ

Published 31 ಮಾರ್ಚ್ 2024, 5:22 IST
Last Updated 31 ಮಾರ್ಚ್ 2024, 5:22 IST
ಅಕ್ಷರ ಗಾತ್ರ

ಪಾವಗಡ: ಪಟ್ಟಣದಲ್ಲಿ ಶನಿವಾರ ಲೋಕಸಭೆ ಚುನಾವಣೆ ಅಂಗವಾಗಿ ಕಾಲ್ನಡಿಗೆ ಜಾಥಾ ನಡೆಯಿತು.

ತಾಲ್ಲೂಕು ಪಂಚಾಯಿತಿ ಆವರಣದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ತಹಶೀಲ್ದಾರ್ ಕಚೇರಿ, ಶನೈಶ್ಚರ ದೇಗುಲ ವೃತ್ತದವರೆಗೆ ಕಾಲ್ನಡಿಗೆ ಮೂಲಕ ಜಾಗೃತಿ ಮೂಡಿಸಲಾಯಿತು.

ತಾಲ್ಲೂಕು ಪಂಚಾಯತಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸೆಲ್ಫಿ ಪಾಯಿಂಟ್‌ನಲ್ಲಿ ಸಾರ್ವಜನಿಕರು ಫೋಟೊ ಕ್ಲಿಕ್ಕಿಸಿಕೊಂಡರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಾನಕಿರಾಂ ಮಾತನಾಡಿ, ಮತದಾನದ ಪ್ರಮಾಣ ಹೆಚ್ಚಿಸಲು ತಾಲ್ಲೂಕಿನಾದ್ಯಂತ ಬೈಕ್ ರಾಲಿ, ಕಾಲ್ನಡಿಗೆ ಜಾಥಾ, ಬೀದಿ ನಾಟಕ ಸೇರಿದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಪೊಲೀಸ್ ಇನ್‌ಸ್ಪೆಕ್ಟರ್ ಸುರೇಶ್, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕ ರಂಗನಾಥ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುನೀತ, ಬಿಸಿಎಂ ಇಲಾಖೆಯ ಗೋಪಾಲಪ್ಪ, ಸಮಾಜಕಲ್ಯಾಣ ಇಲಾಖೆಯ ಯಮುನಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT