ತುಮಕೂರು: ವಿಶ್ವವಿದ್ಯಾಲಯವು ಮೌಲ್ಯಮಾಪನ ಪೂರ್ಣಗೊಂಡ 24 ಗಂಟೆಗಳ ಅವಧಿಯಲ್ಲಿಯೇ ಪದವಿಯ 6ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.
ಬಿಸಿಎ 6ನೇ ಸೆಮಿಸ್ಟರ್ ಪರೀಕ್ಷೆಗಳು ಈಚೆಗೆ ಮುಗಿದಿದ್ದು, ಸೆ. 25ರಂದು ಮೌಲ್ಯಮಾಪನ ಕಾರ್ಯವೂ ಪೂರ್ಣಗೊಂಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೆ. 26ರಂದೇ ಫಲಿತಾಂಶ ಪ್ರಕಟಿಸಲಾಗಿದೆ.
ಇತರೆ ವಿಷಯಗಳ ಮೌಲ್ಯಮಾಪನ ಕಾರ್ಯ ಭರದಿಂದ ಸಾಗುತ್ತಿದೆ. ಶೀಘ್ರದಲ್ಲಿಯೇ ಅಂತಿಮ ವರ್ಷದ ಪದವಿಯ ಎಲ್ಲ ವಿಷಯಗಳ ಫಲಿತಾಂಶ ಪ್ರಕಟಿಸಲು ವಿಶ್ವವಿದ್ಯಾಲಯ ಮುಂದಾಗಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್‍ಸೈಟ್ www.tumkuruniversity.ac.in ಮೂಲಕ ಫಲಿತಾಂಶ ನೋಡಬಹುದು.