ಶುಕ್ರವಾರ, ಸೆಪ್ಟೆಂಬರ್ 17, 2021
30 °C
ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ

ಮದಲೂರು ಕೆರೆಗೆ ನೀರು ಖಚಿತ: ಸಚಿವ ಎ.ನಾರಾಯಣ ಸ್ವಾಮಿ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ‘ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸಿದ್ದು, ಈ ಬಾರಿಯೂ ನೀರು ಹರಿಯುವುದು ಖಚಿತ’ ಎಂದು ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.

ನಗರದಲ್ಲಿ ಮಂಗಳವಾರ ರಾತ್ರಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಅವರು ಮಾತನಾಡಿದರು. ಕಾನೂನಾತ್ಮಕವಾಗಿ ಮದಲೂರು ಕೆರೆಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಅವರ ಜೊತೆ ಸಹ ಚರ್ಚೆ ನಡೆಸಿದ್ದು, ನೀರು ನಿಗದಿ ಮಾಡುವ ಅಧಿಕಾರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಇರುವುದಿಲ್ಲ. ಹೆಚ್ಚುವರಿ ನೀರನ್ನು ತಮ್ಮ ವಿಶೇಷ ಅಧಿಕಾರದ ಮೂಲಕ ಬಿಡುವ ಅಧಿಕಾರ ಮುಖ್ಯಮಂತ್ರಿಗೆ ಇದೆ. ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ವಿಶೇಷ ಅಧಿಕಾರ ಬಳಸಿ ನೀರು ಹರಿಸಿದಂತೆ, ಈ ಬಾರಿಯೂ ನೀರು ಹರಿಸಲಾಗುವುದು. ಜೊತೆಗೆ ಇದಕ್ಕೆ ಶಾಶ್ವತ ಪರಿಹಾರ ರೂಪಿಸಲಾಗುವುದು ಎಂದರು.

‘ಸಚಿವನಾಗಿ ಅಧಿಕಾರ ವಹಿಸಿಕೊಂಡ 29 ದಿನದಲ್ಲಿ ದಾವಣಗೆರೆ- ತುಮಕೂರು ರೈಲು ಮಾರ್ಗದ ಕಾಮಗಾರಿಗೆ ₹1,900 ಕೋಟಿ ಅನುದಾನ ಮಂಜೂರಾತಿ ಮಾಡಿಸಲಾಗಿದೆ’ ಎಂದರು.

ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಮಾತನಾಡಿ, ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತ ಶಾಸಕ, ಸಂಸದ, ಮಂತ್ರಿಯಾಗಬಹುದು. ಪರಿಶಿಷ್ಟರು, ಶೋಷಿತರು ಹಾಗೂ ಹಿಂದುಳಿದವರ ಪರವಾಗಿ ಬಿಜೆಪಿ‌ ಕೆಲಸ ಮಾಡುತ್ತಿದೆ. ಆದರೆ ಬಿಜೆಪಿ ಅಧಿಕಾರಕ್ಕೆ‌ ಬಂದರೆ ಮೀಸಲಾತಿ ರದ್ದು ಪಡಿಸುತ್ತಾರೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡಿದ್ದವು. ಸೈದ್ಧಾಂತಿಕ ನಿಲುವಿಗೆ ಬಿಜೆಪಿ ಬದ್ಧವಾಗಿದ್ದು ಯಾವುದೇ ಕಾರಣಕ್ಕೂ ಮೀಸಲಾತಿ ರದ್ದು ಮಾಡುವ ಪ್ರಶ್ನೆ ಇಲ್ಲ‌ ಎಂದು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ಅದ್ದೂರಿ ಸ್ವಾಗತ: ಕೇಂದ್ರ ಸಚಿವರಾದ ನಂತರ ಮೊದಲ‌ ಬಾರಿಗೆ ನಗರಕ್ಕೆ ಬಂದ ಎ.ನಾರಾಯಣ ಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ದರ್ಗಾ ವೃತ್ತದಿಂದ ಅಂಬೇಡ್ಕರ್ ವೃತ್ತದವರಿಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು. ಅಂಬೇಡ್ಕರ್ ಪ್ರತಿಮೆಗೆ ಸಚಿವರು ಮಾಲಾರ್ಪಣೆ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿದರು. ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ ವಿಜಯರಾಜು, ಗ್ರಾಮಾಂತರ ಮೋರ್ಚಾ ಅಧ್ಯಕ್ಷ ರಂಗಸ್ವಾಮಿ, ಚಂಗಾವರ ಮಾರಣ್ಣ, ಮದಲೂರು ನರಸಿಂಹಮೂರ್ತಿ, ಮುಡಿಮಡು ಮಂಜುನಾಥ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು