ಬುಧವಾರ, ಆಗಸ್ಟ್ 12, 2020
25 °C

ಶುದ್ಧ ನೀರಿನ ಘಟಕ ದುರಸ್ತಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ತಾಲ್ಲೂಕಿನ ಪುರವರ ಗ್ರಾಮದ ಬ್ಯಾಲ್ಯ ರಸ್ತೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು 4 ತಿಂಗಳು ಕಳೆದರೂ ಈವರೆಗೆ ದುರಸ್ತಿ ಮಾಡಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಪುರವರ ಗ್ರಾಮದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಒಂದು ಘಟಕ ಕೆಟ್ಟಿರುವುದರಿಂದ ಕುಡಿಯುವ ನೀರಿಗಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನಿತ್ಯ ಸರತಿ ಸಾಲಿನಲ್ಲಿ ನಿಂತು ನೀರು ತರುವುದೇ ಒಂದು ದೊಡ್ಡ ಕೆಲಸವಾಗಿದೆ. ಕೈ ಕಾಲು ಗಟ್ಟಿ ಇರುವವರು ದೂರ ಹೋಗಿ ಕುಡಿಯುವ ನೀರನ್ನು ತಂದು ಕುಡಿಯುತ್ತಾರೆ. ಆದರೆ, ವಯಸ್ಸಾದವರು ಶುದ್ಧ ನೀರನ್ನು ತಂದು ಕುಡಿಯಲು ಆಗದೇ ಗ್ರಾ.ಪಂ. ಸಿಬ್ಬಂದಿ ಕೊಳವೆಬಾವಿಯಿಂದ ಸರಬರಾಜು ಮಾಡುವ ನೀರನ್ನೇ ಕುಡಿಯುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಕುಡಿಯುವ ನೀರಿನ ಘಟಕದ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ನೀರಿನ ಘಟಕವನ್ನು ತ್ವರಿತ ಗತಿಯಲ್ಲಿ ದುರಸ್ತಿಗೊಳಿಸಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.