ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಪಕ್ಷಗಳಿಂದ ನೀರಿನ ರಾಜಕೀಯ: ಜೆಡಿಎಸ್ ಆರೋಪ

ಬಿಜೆಪಿ, ಕಾಂಗ್ರೆಸ್‌ನಿಂದ ಜನರಿಗೆ ವಂಚನೆ
Last Updated 14 ಆಗಸ್ಟ್ 2021, 4:42 IST
ಅಕ್ಷರ ಗಾತ್ರ

ಶಿರಾ: ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಲಾಭಕ್ಕಾಗಿ ನಾಟಕವಾಡುತ್ತಿವೆ. ಕ್ಷೇತ್ರದ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಮುಡಿಮಡು‌ ರಂಗಶ್ವಾಮಯ್ಯ ಹೇಳಿದರು.

ನಗರದ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ‌.ಮಾಧುಸ್ವಾಮಿ ಅವರು ನೀರು ನಿಗದಿಯಾಗದ ಕಾರಣ ಮದಲೂರು ಕೆರೆಗೆ ನೀರು ಹರಿಸುವುದಿಲ್ಲ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹಾಗೂ ಚಿದಾನಂದ ಎಂ.ಗೌಡ ಅವರ ಸಮ್ಮುಖದಲ್ಲಿ ಹೇಳಿದ್ದಾರೆ. ಅಲ್ಲಿ ಮೌನವಾಗಿದ್ದ ಇಬ್ಬರು ಈಗ ನೀರಿಗಾಗಿ ಜೈಲಿಗೆ ಹೋಗುವುದಾಗಿ ಹೇಳಿಕೆ ನೀಡುತ್ತಾ ನಾಟಕವಾಡುತ್ತಿದ್ದಾರೆ ಎಂದು ದೂರಿದರು.

ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ನೀರು ಹರಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತಾರೆ. ಅವರದೇ ಪಕ್ಷದ ಸರ್ಕಾರ ಇರುವಾಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವುದು ಹಾಸ್ಯಾಸ್ಪದ. ಜಿಲ್ಲಾಧಿಕಾರಿಗೆ ನೀರು ನಿಗದಿ ಮಾಡಿ ಹರಿಸುವ ಅಧಿಕಾರ ಇದೆಯೇ ಎನ್ನುವ ಸಾಮಾನ್ಯ
ಜ್ಞಾನ ಶಾಸಕರಿಗೆ ಇಲ್ಲವೇ ಎಂದು ಪ್ರಶ್ನಸಿದರು.

ಮದಲೂರು ಕೆರೆಗೆ ನೀರು ಪಡೆಯುವುದು ಹಕ್ಕು, ಭಿಕ್ಷೆಯಲ್ಲ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳುತ್ತಾರೆ. ಆದರೆ ತಮ್ಮ ಅಧಿಕಾರಾವಧಿಯಲ್ಲಿ ಹಕ್ಕು ಪಡೆಯಲು ಅವರು ಏಕೆ ನೀರು ಹಂಚಿಕೆ ಮಾಡಿಸಲಿಲ್ಲ. 2023ರ ಚುನಾವಣೆಗಾಗಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಅವರು ತಾಲ್ಲೂಕಿನಲ್ಲಿ ಜೆಡಿಎಸ್‌ಗೆ ನೆಲೆ‌, ಮುಂದಿನ ಚುನಾವಣೆಗೆ ಅಭ್ಯರ್ಥಿ ಇಲ್ಲ ಎಂದು ಹೇಳಿದ್ದಾರೆ. ಆದರೆ ಅವರನ್ನು ಈ ಮಟ್ಟಕ್ಕೆ ಬೆಳೆಸಿದ್ದು ಜೆಡಿಎಸ್ ಎನ್ನುವುದನ್ನು ಮರೆತಿದ್ದಾರೆ. ಅವರ ಪಕ್ಷದಲ್ಲಿನ ಗೊಂದಲಗಳನ್ನು ಮುಚ್ಚಿಕೊಳ್ಳಲು ಜೆಡಿಎಸ್‌ ಬಗ್ಗೆ ಮಾತನಾಡುತ್ತಿದ್ದಾರೆ. ಮುಂದಿನ ಚುನಾವಣೆಗೆ ನಿಮ್ಮ ಅಸ್ಥಿತ್ವ ಉಳಿಸಿಕೊಳ್ಳಿ. ಸ್ಥಳೀಯರಿಗೆ ಟಿಕೆಟ್‌ ನೀಡುವ ಮೂಲಕ, 2023ರ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ ಅವರು ದ್ವಂದ್ವ ಹೇಳಿಕೆ ನೀಡುವುದನ್ನು ನಿಲ್ಲಿಸಲಿ. ಬರಗೂರು ಗ್ರಾಮದಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ತಾಲ್ಲೂಕಿಗೆ ನೀರಾವರಿ ಸೌಲಭ್ಯ ತಂದಿದ್ದು ಜಯಚಂದ್ರ ಎಂದು ಹೇಳಿ ಈಗ ಅವರ ಕೊಡುಗೆ ಏನು ಇಲ್ಲ ಎಂದು ಹೇಳುವ ಮೂಲಕ ಯಾರನ್ನೋ ಮೆಚ್ಚಿಸುವುದನ್ನು ನಿಲ್ಲಿಸಲಿ ಎಂದು ಹೇಳಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಉಗ್ರೇಶ್, ಹೊಸಹಳ್ಳಿ ರಾಮಚಂದ್ರಪ್ಪ, ರಹಮತ್ ಖಾನ್, ಸೋಮಣ್ಣ, ರೇಣುಕಮ್ಮ, ಶ್ರೀರಂಗ, ಕೊಲ್ಲಾರಪ್ಪ, ಕರಿಯಣ್ಣ, ಹೇಮಂತಕುಮಾರ್ ಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT