ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಮಸ್ಯೆ: 168 ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆ

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಹೇಳಿಕೆ
Last Updated 15 ಮೇ 2019, 16:58 IST
ಅಕ್ಷರ ಗಾತ್ರ

ತುಮಕೂರು: ‘ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಸಾರ್ವಜನಿಕ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಜಿಲ್ಲೆಯ 86 ಗ್ರಾಮ ಪಂಚಾಯಿತಿಗಳ 168 ಗ್ರಾಮಗಳಿಗೆ ಟ್ಯಾಂಕರ್ ಮೂಲಕ 452 ಟ್ರಿಪ್ ನೀರು ಪೂರೈಕೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದಲ್ಲದೇ 198 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 135 ಕೊಳವೆಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಜನವರಿ 1ರಿಂದ ಈವರೆಗೂ 1088 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಇದರಲ್ಲಿ 778 ಕೊಳವೆ ಬಾವಿ ಸಫಲವಾಗಿವೆ’ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸಾರ್ವಜನಿಕ ದೂರುಗಳನ್ನು ಸ್ವೀಕರಿಸುವ ಸಲುವಾಗಿ ಗ್ರಾಮಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಹಂತದಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ದಿನದ 24 ಗಂಟೆಯೂ ಇವು ಸಕ್ರಿಯವಾಗಿರುತ್ತವೆ. ಸಹಾಯವಾಣಿ ಮೂಲಕ ಸ್ವೀಕರಿಸುವ ದೂರುಗಳಿಗೆ 24 ಗಂಟೆಯೊಳಗಾಗಿ ಪರಿಹಾರ ಒದಗಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT