ಬುಧವಾರ, ಜನವರಿ 20, 2021
26 °C
ಮಧುಗಿರಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ

ಎತ್ತಿನಹೊಳೆ: 54 ಕೆರೆಗಳಿಗೆ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಧುಗಿರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ₹900 ಕೋಟಿ ಬಿಡುಗಡೆ ಮಾಡಿದ್ದರು’ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.

ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ತಾಲ್ಲೂಕು ಜೆಡಿಎಸ್ ಘಟಕದಿಂದ ನೂತನವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಸದಸ್ಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದಲ್ಲಿ ರಸ್ತೆ, ಚೆಕ್ ಡ್ಯಾಂ ಹಾಗೂ ಕಾಲುವೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಮಾಡಲಾಗಿದೆ. ಎತ್ತಿನಹೊಳೆ ಯೋಜನೆ ಕಾಮಗಾರಿ ಕೆಲಸ ಎರಡು ವರ್ಷಗಳಲ್ಲಿ ಮುಕ್ತಾಯಗೊಂಡು, ತಾಲ್ಲೂಕಿನ 54 ಕೆರೆಗಳಿಗೆ ನೀರು ಬರಲಿದೆ ಎಂದರು.

ಮರುವೇಕೆರೆ, ಬೇಡತ್ತೂರು, ದಬ್ಬೇಘಟ್ಟ, ಮಿಡಿಗೇಶಿ ಹಾಗೂ ದೊಡ್ಡ
ಯಲ್ಕೂರು ಗ್ರಾಮ ಪಂಚಾಯಿತಿಗಳು 30 ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರ ವಶದಲ್ಲಿದ್ದವು. ಆದರೆ ಈಗ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಮತದಾರರು ಆಯ್ಕೆ ಮಾಡಿದ್ದಾರೆ. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ‘30 ಗ್ರಾ.ಪಂ. ಕೈವಶವಾಗಿದೆ’ ಎಂದು ಹೇಳಿಕೆ ನೀಡಿದ್ದರು. ಇನ್ನು 3 ಗ್ರಾ.ಪಂ.ಗಳನ್ನು ಬಿಟ್ಟಿರು
ವುದು ಯಾಕೆ ಎಂದು ಪ್ರಶ್ನಿಸಿದರು.

ಪುರಸಭೆ ಸದಸ್ಯ ಎಂ.ಎಲ್.ಗಂಗರಾಜು ಮಾತನಾಡಿ, ‘ಜೆಡಿಎಸ್ ಕಾರ್ಯಕರ್ತರ ಪಕ್ಷವಾಗಿದ್ದು, ಈ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮತಗಳಿಕೆಯಲ್ಲಿ ಕಾಂಗ್ರೆಸ್ ಗಳಿಸಿದ ಮತಗಳಿಕೆಗಿಂತ ಮುಂದಿದ್ದು, ನಮ್ಮ ಕಾರ್ಯಕರ್ತರು ಎದೆಗುಂದುವ ಅಗತ್ಯವಿಲ್ಲ. ಶಾಸಕರು ಉತ್ತಮವಾದ ಕೆಲಸ - ಕಾರ್ಯಗಳನ್ನು ಮಾಡುತ್ತಿದ್ದು, ಜನಪರ ಶಾಸಕರಾಗಿದ್ದಾರೆ’ ಎಂದರು.

ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ್ ಮಾತನಾಡಿ, ‘ಶಾಸಕ ಎಂ.ವಿ.ವೀರಭದ್ರಯ್ಯ ಅವರು ಕಳೆದ ಬಾರಿ ಚುನಾವಣೆಯಲ್ಲಿ 19 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದರು. ಮುಂಬರುವ ಚುನಾವಣೆಯಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾಗುವುದು ಖಚಿತ’ ಎಂದು ತಿಳಿಸಿದರು.

ಜೆಡಿಎಸ್ ಎಸ್‍.ಟಿ. ಘಟಕದ ಅಧ್ಯಕ್ಷ ಚಂದ್ರಗಿರಿ ರವಿಕುಮಾರ್, ಗ್ರಾ.ಪಂ.ಸದಸ್ಯರಾದ ಸುರೇಶ್, ವಿಜಯ್ ಪ್ರಕಾಶ್, ಮುಖಂಡ ಟಿ.ರಾಮಣ್ಣ ಮಾತನಾಡಿದರು. ನೂತನವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಗ್ರಾ.ಪಂ.ಸದಸ್ಯರನ್ನು ಸನ್ಮಾನಿಸಲಾಯಿತು.

ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್ ಬಾಬು, ಕೆ.ನಾರಾಯಣ್, ನರಸಿಂಹಮೂರ್ತಿ, ಗ್ರಾ.ಪಂ.ಮಾಜಿ ಅಧ್ಯಕ್ಷ ರಂಗನಾಥ್, ಪಿಎಲ್‌ಡಿ ಬ್ಯಾಂಕ್ ಮಾಜಿ ನಿರ್ದೇಶಕರಾದ ಚೌಡಪ್ಪ, ಚಂದ್ರಶೇಖರ್, ಮುಖಂಡರಾದ ಟಿ.ಗೋವಿಂದರಾಜು, ಬಿ.ಎಸ್.ಶ್ರೀನಿವಾಸ್, ಶಿವಕುಮಾರ್, ಡಿ.ವಿ.ಹಳ್ಳಿ ತಿಮ್ಮಣ್ಣ, ವೆಂಕಟಾಪುರ ಗೋವಿಂದರಾಜು, ರಾಜ ಮೋಹನ್, ರಾಘವೇಂದ್ರ, ಮೋಹನ್ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.