ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಸಿ’

ರಾಜ್ಯ ಸರ್ಕಾರಕ್ಕೆ ಹೋರಾಟ ಸಮಿತಿ ಒತ್ತಾಯ
Last Updated 30 ಸೆಪ್ಟೆಂಬರ್ 2021, 4:50 IST
ಅಕ್ಷರ ಗಾತ್ರ

ತಿಪಟೂರು: ಎತ್ತಿನಹೊಳೆ ಯೋಜನೆಯಲ್ಲಿ ತಾಲ್ಲೂಕಿಗೆ ನೀರು ಹಂಚಿಕೆ ಮಾಡಬೇಕು. ಜೊತೆಗೆ ಸ್ಥಳೀಯ ಕೆರೆಗಳಿಗೆ ನೀರು ನೀಡಬೇಕೆಂದು ಒತ್ತಾಯಿಸಿ ಎತ್ತಿನಹೊಳೆ ಹೋರಾಟ ಸಮಿತಿಯ ಪದಾಧಿಕಾರಿಗಳು ಕುಪ್ಪಾಳು ಗ್ರಾ. ಪಂ.ಗೆ ಮನವಿ ಸಲ್ಲಿಸಿದ್ದಾರೆ.

ಪಂಚಾಯಿತಿ ಅಧ್ಯಕ್ಷ ಯೋಗಾನಂದಸ್ವಾಮಿಗೆ ತಾಲ್ಲೂಕಿನ ಎತ್ತಿನಹೊಳೆ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ ನೀರು ಹಂಚಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಸಿದ ನಂತರ ಎತ್ತಿನಹೊಳೆ ಹೋರಾಟ ಸಮಿತಿಯ ಉಪಾಧ್ಯಕ್ಷ ಬಿ.ಬಿ. ಸಿದ್ದಲಿಂಗಮೂರ್ತಿ ಮಾತನಾಡಿ, ತಾಲ್ಲೂಕಿನಲ್ಲಿ ಸುಮಾರು 55 ಕಿ.ಮೀ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಯೂ ಹಾದು ಹೋಗಲಿದೆ. ಇದರಿಂದ 1,200ಕ್ಕೂ ಎಕರೆಗೂ ಹೆಚ್ಚು ಭೂಮಿಯನ್ನು ರೈತರು ಕಳೆದುಕೊಳ್ಳಲಿದ್ದಾರೆ ಎಂದರು.

ಗ್ರಾಮೀಣ ಭಾಗದ 13 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಯೋಜನೆ ಬರಲಿದೆ. ಯಾವುದೇ ಕೆರೆಗಳಿಗೆ, ತಾಲ್ಲೂಕಿಗೆ ನೀರು ಹಂಚಿಕೆ ಆಗದಿರುವುದು ನಿಜಕ್ಕೂ ದುರಂತದ ಸಂಗತಿ. ರೈತರು, ಸಾರ್ವಜನಿಕರು, ಹೋರಾಟಗಾರರು ಅನೇಕ ಪ್ರತಿಭಟನೆ, ಹೋರಾಟ, ಪತ್ರ ವ್ಯವಹಾರ ಮಾಡಿದರೂ ಇಲ್ಲಿಯವರೆವಿಗೂ ಯಾವುದೇ ಪ್ರತಿಕ್ರಿಯೆಯು ಅಧಿಕಾರಿಗಳಿಂದ ದೊರೆತಿಲ್ಲ ಎಂದು ದೂರಿದರು.

ಇದೀಗ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅಲ್ಲಿನ ಜನಪ್ರತಿನಿಧಿಗಳು ತಮ್ಮ ಪಂಚಾಯಿತಿಯಿಂದ ಸರ್ಕಾರಕ್ಕೆ ಮನವಿ ಕಳುಹಿಸಲು ಎಲ್ಲರಿಗೂ ಮನವಿ ಮಾಡಿಕೊಳ್ಳುತ್ತಿದ್ದೇವೆ. ಅದರಂತೆ ಕುಪ್ಪಾಳು ಪಂಚಾಯಿತಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ ಎಂದರು.

ಎತ್ತಿನಹೊಳೆ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಧರಣೀಶ್, ಆರ್.ಡಿ. ಯೋಗಾನಂದ ಸ್ವಾಮಿ, ಸುಂದರೇಶ್, ಕೆ.ಎಸ್. ಕುಮಾರಯ್ಯ, ರಮೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT